ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಆತ್ಮನಿರ್ಭರ ವಿಶೇಷ ಆರ್ಥಿಕ ಪ್ಯಾಕೇಜಿನಲ್ಲಿ ವಲಸೆ ಕಾರ್ಮಿಕರಿಗೆ 11 ಸಾವಿರ ಕೋಟಿ ಮೀಸಲಿಡಲಾಗಿದೆ.
ಲಾಕ್‌ಡೌನ್ ಹಿನ್ನಲೆಯಲ್ಲಿ ಮಂಗಳವಾರದಂದು ಪ್ರಧಾನಿ ಮೋದಿ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ವಿತ್ತ ಸಚಿವಾಲಯ ಪ್ಯಾಕೇಜಿನ ವಿವರಣೆ ನೀಡುವ ಸಲುವಾಗಿ ಸರಣಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳಿತ್ತು.
ಇದರ ಭಾಗವಾಗಿ ಎರಡನೇ ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಲಸೆ ಕಾರ್ಮಿಕರ ಮೂಲ ಸೌಕರ್ಯ ಒದಗಿಸಲು SDRF ಗೆ (ರಾಜ್ಯ ವಿಪತ್ತು ನಿರ್ವಹಣಾ ನಿಧಿ) 11 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಈ ನಿಧಿಯನ್ನು ಆಹಾರ, ವಸತಿ ಮೊದಲಾದ ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸುವುದಾಗಿ ಹೇಳಿದ್ದಾರೆ.