• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿರೋಧ ಪಕ್ಷಗಳನ್ನು ಎದುರಿಸುವ ಧೈರ್ಯ ಸರ್ಕಾರಕ್ಕಿಲ್ಲ- ಸಿದ್ದರಾಮಯ್ಯ

by
October 25, 2020
in ಕರ್ನಾಟಕ
0
ವಿರೋಧ ಪಕ್ಷಗಳನ್ನು ಎದುರಿಸುವ ಧೈರ್ಯ ಸರ್ಕಾರಕ್ಕಿಲ್ಲ- ಸಿದ್ದರಾಮಯ್ಯ
Share on WhatsAppShare on FacebookShare on Telegram

“ಕಳೆದ ಮೂರು ತಿಂಗಳುಗಳ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದ ರೈತರು ಬೆಳೆ-ಮನೆ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲು ಸಿಎಂ ಯಡಿಯೂರಪ್ಪ ಅವರು ತಕ್ಷಣ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ಒತ್ತಾಯಿಸುತ್ತಿದ್ದೇನೆ. ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ, ನೆರೆನೀರಿನ ಶೀತ ಇಳಿಯದೆ ಹಿಂಗಾರು ಬಿತ್ತನೆ ಮಾಡೋ ಹಾಗಿಲ್ಲ. ಎರಡೂ ಬೆಳೆಗಳನ್ನು ಕಳೆದುಕೊಂಡಿರುವ ರೈತರ ಕಷ್ಟಗಳನ್ನು ಕೇಳುವವರೇ ಇಲ್ಲ. ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿಹೋಗಿರುವ ಸರ್ಕಾರ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇಲ್ಲಿಯ ವರೆಗೆ ಸರ್ಕಾರ ಪ್ರವಾಹದ ನಷ್ಟದ ಸಮೀಕ್ಷೆನೇ ಮಾಡಿಲ್ಲ.‌ ಸಿಎಂ ವಿಮಾನದಲ್ಲಿ ನೋಡಿ ಹೋದರು, ಕಂದಾಯ ಸಚಿವರು ಕಾಟಾಚಾರಕ್ಕೆ ಭೇಟಿ ನೀಡಿದರು, ಜಿಲ್ಲಾ ಸಚಿವರಾಗಲಿ, ಅಧಿಕಾರಿಗಳು ಜನರ ಬಳಿ ಹೋಗಿಯೇ ಇಲ್ಲ. ಇಡೀ ಸರ್ಕಾರವೇ ನೆರೆಯಲ್ಲಿ ಕೊಚ್ಚಿಕೊಂಡ ಹೋಗಿರುವಂತಹ ದುಸ್ಥಿತಿ ಇದೆ. ಒಂದೆಡೆ ಕೊರೊನಾ, ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಹಾಳಾಗಿ ಹೋಗಿರುವ ಶಾಂತಿ ಮತ್ತು ಸುವ್ಯವಸ್ಥೆ, ಇವೆಲ್ಲದರ ನಡುವೆ ಭ್ರಷ್ಟಾಚಾರದ ಹಗರಣಗಳು. ಈ ಬಗ್ಗೆ ಚರ್ಚೆಗೆ ನಡೆಸಲು ವಿಧಾನಮಂಡಲವೇ ಸೂಕ್ತ ವೇದಿಕೆ. ಆದರೆ ವಿರೋಧ ಪಕ್ಷಗಳನ್ನು ಎದುರಿಸುವ ಧೈರ್ಯವೇ ರಾಜ್ಯ ಸರ್ಕಾರಕ್ಕೆ‌‌ ಇಲ್ಲ, ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಒಂದೆಡೆ ಕೊರೊನಾ,
ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಹಾಳಾಗಿ ಹೋಗಿರುವ ಶಾಂತಿ ಮತ್ತು ಸುವ್ಯವಸ್ಥೆ,
ಇವೆಲ್ಲದರ ನಡುವೆ ಭ್ರಷ್ಟಾಚಾರದ ಹಗರಣಗಳು.
ಈ ಬಗ್ಗೆ ಚರ್ಚೆಗೆ ನಡೆಸಲು ವಿಧಾನಮಂಡಲವೇ ಸೂಕ್ತ ವೇದಿಕೆ.
ಆದರೆ ವಿರೋಧಪಕ್ಷಗಳನ್ನು ಎದುರಿಸುವ ಧೈರ್ಯವೇ ರಾಜ್ಯ ಸರ್ಕಾರಕ್ಕೆ‌‌ ಇಲ್ಲ.
2/10#ಬಸವಕಲ್ಯಾಣ

— Siddaramaiah (@siddaramaiah) October 25, 2020


ಕೇಂದ್ರಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಿದರೆ ರೈತರ ನಷ್ಟ ಭರಿಸಲಾಗದು. ನಮ್ಮ ಸರ್ಕಾರ ಒಂದು ಹೆಕ್ಟೇರ್ ಗೆ ರೂ. 25,000 ಪರಿಹಾರ ಕೊಟ್ಟಿತ್ತು. ಅದೇ ರೀತಿ ಕೊಡಬೇಕು. ಕಳೆದ ವರ್ಷದ‌ ಪ್ರವಾಹದ ಹಾನಿಗೆ ಇಲ್ಲಿಯ ವರೆಗೆ ಪರಿಹಾರ ನೀಡದ ರಾಜ್ಯ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ? ಒಂದು ಅಂದಾಜಿನ ಪ್ರಕಾರ ಸುಮಾರು ಆರುಕಾಲು ಲಕ್ಷ ಎಕರೆಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಕೇವಲ ಬೆಳೆಹಾನಿಯಿಂದಲೇ ರೂ. 1,500 ಕೋಟಿ ನಷ್ಟವಾಗಿದೆ.,1700 ಮನೆಗಳು ಬಿದ್ದಿವೆಯಂತೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಲ್ಲಿಯ ವರೆಗೆ ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ, ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಇಂದು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದಿಂದ ಬೆಳೆ ನಷ್ಟಕ್ಕೀಡಾಗಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದೆ.#Basavakalyana pic.twitter.com/6Iax2U4H09

— Siddaramaiah (@siddaramaiah) October 25, 2020


ADVERTISEMENT

ಇದಕ್ಕೂ ಮೊದಲು ಸಿದ್ದರಾಮಯ್ಯ ಅವರು ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಅಹವಾಲು ಆಲಿಸಿದ್ದರು. ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರವಾಹದಿಂದ ಬೆಳೆ ನಷ್ಟಕ್ಕೀಡಾಗಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದ್ದಾರೆ.

Tags: siddaramaiahಸಿದ್ದರಾಮಯ್ಯ
Previous Post

FDIಗೆ ಅವಕಾಶ ನೀಡಲಿರುವ ʼಸ್ಪೇಸ್‌ಕಾಮ್‌ ಪಾಲಿಸಿ – 2020ʼ

Next Post

ಬಿಹಾರ ಚುನಾವಣೆ: ಅಧಿಕಾರಕ್ಕೆ ಬಂದರೆ ನಿತೀಶ್‌ರನ್ನು ಜೈಲಿಗಟ್ಟುವೆ – ಚಿರಾಗ್‌ ಪಾಸ್ವಾನ್‌

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬಿಹಾರ ಚುನಾವಣೆ: ಅಧಿಕಾರಕ್ಕೆ ಬಂದರೆ ನಿತೀಶ್‌ರನ್ನು ಜೈಲಿಗಟ್ಟುವೆ - ಚಿರಾಗ್‌ ಪಾಸ್ವಾನ್‌

ಬಿಹಾರ ಚುನಾವಣೆ: ಅಧಿಕಾರಕ್ಕೆ ಬಂದರೆ ನಿತೀಶ್‌ರನ್ನು ಜೈಲಿಗಟ್ಟುವೆ - ಚಿರಾಗ್‌ ಪಾಸ್ವಾನ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada