• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿಶ್ವಾಸ ಉಳಿಸಿಕೊಳ್ಳಲು ಫೇಸ್ಬುಕ್ ಚಟುವಟಿಕೆಗಳನ್ನು ತನಿಖೆ ಮಾಡಿ: ಶ್ರೀನಿವಾಸ್ ಬಿ.ವಿ.

by
August 19, 2020
in ದೇಶ
0
ವಿಶ್ವಾಸ ಉಳಿಸಿಕೊಳ್ಳಲು ಫೇಸ್ಬುಕ್ ಚಟುವಟಿಕೆಗಳನ್ನು ತನಿಖೆ ಮಾಡಿ: ಶ್ರೀನಿವಾಸ್ ಬಿ.ವಿ.
Share on WhatsAppShare on FacebookShare on Telegram

ಭಾರತೀಯ ಯುವ ಕಾಂಗ್ರೆಸ್ (IYC) ರಾಷ್ಟ್ರೀಯ ಅಧ್ಯಕ್ಷ ಶ್ರೀ ಶ್ರೀನಿವಾಸ್ ಬಿ.ವಿ. ಅವರ ಸೂಚನೆಯ ಮೇರೆಗೆ ತೆಲಂಗಾಣ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಯಾದವ್ ನೇತೃತ್ವದಲ್ಲಿ ಹೈದರಾಬಾದಿನ ಫೇಸ್‌ಬುಕ್ ಇಂಡಿಯಾ ಪ್ರಧಾನ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು‌.

ADVERTISEMENT

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, “ದ್ವೇಷವನ್ನು ಉತ್ತೇಜಿಸಲು ಫೇಸ್‌ಬುಕ್ ಮತ್ತು ಬಿಜೆಪಿ ನಡುವೆ ಒಪ್ಪಂದ ಆಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕೃತಕವಾಗಿ ಸಾರ್ವಜನಿಕ ಅಭಿಪ್ರಾಯ ರೂಪಿಸುತ್ತಿರುವುದು ಭಾರತದ ಜನರಿಗೆ ತೋರಿದ ಅಗೌರವವಾಗಿದೆ. ಆದುದರಿಂದ ಫೇಸ್‌ಬುಕ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್ ಬಳಕೆದಾರರ ವಿಶ್ವಾಸವನ್ನು ಪುನಃಸ್ಥಾಪಿಸಲು ಇಡೀ ವಿಷಯವನ್ನು ವಸ್ತುನಿಷ್ಠವಾಗಿ ತನಿಖೆ ಮಾಡಬೇಕು. ಮುಕ್ತ ಮತ್ತು ಸ್ವತಂತ್ರ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿಯನ್ನೂ ರಚಿಸಬೇಕು ಎಂದು ಒತ್ತಾಯಿಸಿದರು.

ಅಮೇರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್(Wall street journal) ತಮ್ಮ ವಾಣಿಜ್ಯ ಹಿತಾಸಕ್ತಿಗಳಿಂದಾಗಿ ಬಿಜೆಪಿ(bjp) ಮತ್ತು ಆರ್‌ಎಸ್‌ಎಸ್ (RSS)‌ ಕಾರ್ಯಸೂಚಿಗಳ ಆಧಾರದ ಮೇಲೆ ದ್ವೇಷ ಮತ್ತು ಕೋಮುವಾದಿ ಪೋಸ್ಟ್‌ಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದೆ ಎಂದು ವರದಿ ಮಾಡಿದೆ. ಬಿಜೆಪಿ ಮುಖಂಡರಾದ ಟಿ. ರಾಜ ಸಿಂಗ್, ಕಪಿಲ್ ಮಿಶ್ರಾ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ದ್ವೇಷದ ಪೋಸ್ಟ್‌ಗಳನ್ನು ತೆಗೆದುಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಿದ ಭಾರತದ ಫೇಸ್ ಬುಕ್ ನೀತಿ ಮುಖ್ಯಸ್ಥೆ ಅಂಕಿ ದಾಸ್ ದ್ವೇಷದ ಪೋಸ್ಟ್‌ಗಳ ಮೇಲೆ ಆಗಬೇಕಿದ್ದ ಕ್ರಮಗಳನ್ನು ಪಡೆದಿದ್ದಾರೆ. ಈ ಕೃತ್ಯಕ್ಕಾಗಿ ಅಂಕಿ ದಾಸ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ದ್ವೇಷ ಭಾಷಣ ಮಾಡುವ ಬಿಜೆಪಿ ನಾಯಕರನ್ನು ಫೇಸ್‌ಬುಕ್ ನಿಂದ ನಿಷೇಧಿಸಲು ಅಂಕಿ ದಾಸ್ ಕ್ರಮ ಕೈಗೊಂಡಿಲ್ಲ. “ಫೇಸ್‌ಬುಕ್ ಇಂಡಿಯಾ ‘ನಿಷ್ಪಕ್ಷಪಾತದ ನಿಯಮಗಳನ್ನು’ ಉಲ್ಲಂಘಿಸಿದೆ. ಆದ್ದರಿಂದ ಈ ಅಪವಿತ್ರ ಮೈತ್ರಿಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾರ್ಪೊರೇಟ್ ಮತ್ತು ರಾಜಕೀಯ ಪಕ್ಷಗಳ ನಡುವಿನ ಇಂತಹ ಮೈತ್ರಿಗಳು ಆರೋಗ್ಯಕರ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ವಿರುದ್ಧವಾಗಿವೆ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಫೇಸ್‌ಬುಕ್ ಮತ್ತು ಬಿಜೆಪಿ ನಡುವಿನ ಈ ಅಪವಿತ್ರ ಸಂಬಂಧವನ್ನು ಬಹಿರಂಗಪಡಿಸಬೇಕೆಂದು ಕಾಂಗ್ರೆಸ್ ಪಕ್ಷವು ಧ್ವನಿ ಎತ್ತಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಲಕ್ಷಾಂತರ ಫೇಸ್‌ಬುಕ್ ಮತ್ತು ವಾಟ್ಸಾಪ್ ಬಳಕೆದಾರರು ಭಾರತದಲ್ಲಿದ್ದಾರೆ. ಸಾಮಾಜಿಕ ಮಾಧ್ಯಮವು ಸಾರ್ವಜನಿಕರಿಗೆ ಅಭಿವ್ಯಕ್ತಿ ಮಾಧ್ಯಮವಾಗಿದೆ ಮತ್ತು ಈ ಮಾಧ್ಯಮಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿರುವುದು ಅತ್ಯಗತ್ಯ. ಆದ್ದರಿಂದ ಫೇಸ್‌ಬುಕ್‌ನಲ್ಲಿ ಸಾರ್ವಜನಿಕರ ನಂಬಿಕೆಯನ್ನು ಪುನಃಸ್ಥಾಪಿಸುವಂತೆ ಕಾಂಗ್ರೆಸ್ ಒತ್ತಾಯಿಸುತ್ತದೆ. ಅದಕ್ಕಾಗಿ ಈ ಕೆಳಕಂಡ ಬೇಡಿಕೆ ಇಡುತ್ತಿದೆ ಎಂದು ತಿಳಿಸಿದರು.

  1. ಫೇಸ್‌ಬುಕ್ ಪ್ರಧಾನ ಕಚೇರಿ ಭಾರತದಲ್ಲಿ ನಡೆದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕು ಮತ್ತು ತನಿಖೆಗೆ ಸಂಬಂಧಿಸಿದ ವರದಿಯನ್ನು ಸರಿಯಾದ ಸಮಯದಲ್ಲಿ ಸಾರ್ವಜನಿಕವಾಗಿ ಪ್ರಕಟಿಸಬೇಕು.

  2. 2014ರಿಂದ ಈವರೆಗೆ ದ್ವೇಷವನ್ನು ಉತ್ತೇಜಿಸುವ ಪೋಸ್ಟ್‌ಗಳನ್ನು ಪಾರದರ್ಶಕ ರೀತಿಯಲ್ಲಿ ಪರಿಶೀಲಿಸಬೇಕು. ವಾಲ್ ಸ್ಟ್ರೀಟ್ ಜರ್ನಲ್ ವರದಿಯು ಕೇವಲ 3 ಬಿಜೆಪಿ ಮುಖಂಡರ ಬಗ್ಗೆ ಬೆಳಕುಚೆಲ್ಲಿದೆ. ವಾಸ್ತವವಾಗಿ ಇಂತಹ ಅನೇಕ ದ್ವೇಷದ ಪೋಸ್ಟ್‌ಗಳು ನಿಯಮಿತವಾಗಿ ಕಾಣಿಸಿಕೊಳ್ಳುತ್ತಿವೆ. ಭಾವನಾತ್ಮಕ ವಿಷಯಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕುಶಲತೆಯಿಂದ ನಿರ್ವಹಿಸಲಾಗುತ್ತಿದೆ. ಇದನ್ನು ಗಮನ ಹರಿಸಬೇಕು.

  3. ಆಂತರಿಕ ತನಿಖಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ, ಹಳೆಯ ತಂಡಗಳು ತನಿಖೆಯ ಮೇಲೆ ಪ್ರಭಾವ ಬೀರದಂತೆ ಫೇಸ್‌ಬುಕ್ ಇಂಡಿಯಾವನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಸ ತಂಡಕ್ಕೆ ನೀಡಬೇಕು.

ಈ ಪ್ರದರ್ಶನದಲ್ಲಿ ತೆಲಂಗಾಣ ಯುವ ಕಾಂಗ್ರೆಸ್ ಘಟಕದ ನೂರಾರು ಪದಾಧಿಕಾರಿಗಳು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.

Tags: ಯುವ ಕಾಂಗ್ರೆಸ್
Previous Post

ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ನಿರ್ಲಕ್ಷಿಸಿ ಬೇಜವಾಬ್ದಾರಿ ತೋರಿದ ಕೇಂದ್ರ ಸರ್ಕಾರ

Next Post

ಸಂಘಟಿತ ವಲಯದಲ್ಲಿ 18 ದಶಲಕ್ಷ ಉದ್ಯೋಗ ನಷ್ಟ; ಮರೀಚಿಕೆಯಾದ ಆರ್ಥಿಕ ಚೇತರಿಕೆ

Related Posts

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
0

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು....

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post
ಸಂಘಟಿತ ವಲಯದಲ್ಲಿ 18 ದಶಲಕ್ಷ ಉದ್ಯೋಗ ನಷ್ಟ; ಮರೀಚಿಕೆಯಾದ ಆರ್ಥಿಕ ಚೇತರಿಕೆ

ಸಂಘಟಿತ ವಲಯದಲ್ಲಿ 18 ದಶಲಕ್ಷ ಉದ್ಯೋಗ ನಷ್ಟ; ಮರೀಚಿಕೆಯಾದ ಆರ್ಥಿಕ ಚೇತರಿಕೆ

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada