• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಲಾ ಕಾಲೇಜು ತೆರೆಯುವ ಯಾವುದೇ ಆಲೋಚನೆ ಇಲ್ಲ..!

by
August 11, 2020
in ಕರ್ನಾಟಕ
0
ಶಾಲಾ ಕಾಲೇಜು ತೆರೆಯುವ ಯಾವುದೇ ಆಲೋಚನೆ ಇಲ್ಲ..!
Share on WhatsAppShare on FacebookShare on Telegram

ಶಾಲಾ ಕಾಲೇಜು ತೆರೆಯಲು ರಾಜ್ಯ ಸರ್ಕಾರ ತುದಿಗಾಲಲ್ಲಿ ನಿಂತಿತ್ತು. ಆದರೆ ಕೇಂದ್ರ ಸರ್ಕಾರದ ನಿರ್ದೇಶನನಕ್ಕಾಗಿ ಕಾಯುತ್ತಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ಈ ವರ್ಷ ಶಾಲೆ ತೆರೆಯುವ ಆಲೋಚನೆಯೇ ಇಲ್ಲ ಎನ್ನುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟ ಮಾಡಿದೆ. ಆದರೆ ಪರೀಕ್ಷೆ ನಡೆಸಿ ಫಲಿತಾಂಶ ನೀಡುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದೂ ಕೂಡ ಘೋಷಿಸಿದೆ.

ADVERTISEMENT

2020-21ನೇ ಶೈಕ್ಷಣಿಕ ವರ್ಷವನ್ನು ಶೂನ್ಯ ವರ್ಷ ಎಂದು ಪರಿಗಣಿಸಲಾಗುವುದು. ಆದರೆ ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಶೈಕ್ಷಣಿಕ ಸಂಸ್ಥೆಗಳೂ ಕೂಡ ಪರೀಕ್ಷೆ ನಡೆಸಬೇಕಾಗುತ್ತದೆ ಎಂದಿದ್ದಾರೆ. ಅಂದರೆ ಮಕ್ಕಳು ಮನೆಯಲ್ಲೇ ಓದಿಕೊಂಡು ಹೋಗಿ ಪರೀಕ್ಷೆ ಬರೆಯುವುದು ಅನಿವಾರ್ಯ ಎನ್ನುವುದು ಕೇಂದ್ರ ಸರ್ಕಾರದ ನಿರ್ಧಾರದ ಹಿಂದಿನ ಉದ್ದೇಶ ಆಗಿದೆ.

ಯಾವ ತರಗತಿ ಹೇಗೆ ನಡೆಯಬೇಕು..?

ಆನ್ಲೈನ್ ತರಗತಿ ನಡೆಸಲು ಯಾವುದೇ ಅಡ್ಡಿ ಇಲ್ಲ ಎಂದು ಕೋರ್ಟ್ ಹೇಳಿದ ಬಳಿಕ 1ನೇ ತರಗತಿ ಮಕ್ಕಳಿಂದ ಹಿಡಿದು ಪದವಿ ವಿದ್ಯಾರ್ಥಿಗಳಿಗೂ ಆನ್ಲೈನ್ ಮೂಲಕವೇ ತರಗತಿಗಳನ್ನು ನಡೆಸಲಾಗ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಹೊಸ ಮಾನದಂಡ ರೂಪಿಸಿದೆ. 3ನೇ ತರಗತಿವರೆಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಇರುವುದಿಲ್ಲ. 4ನೇ ತರಗತಿಯಿಂದ 7ನೇ ತರಗತಿ ತನಕ ಕಡಿಮೆ ಪ್ರಮಾಣದಲ್ಲಿ ಆನ್ಲೈನ್ ಶಿಕ್ಷಣ ಇರಲಿದೆ ಎನ್ನಲಾಗಿದೆ. ಪ್ರೌಢಶಾಲೆಯ ಮಕ್ಕಳಿಗೆ ಅಂದರೆ 8ನೇ ತರಗತಿಯಿಂದ ಸಂಪೂರ್ಣ ಆನ್ಲೈನ್ ಶಿಕ್ಷಣ ವ್ಯವಸ್ಥೆ ಇರಲಿದೆ ಕಾಲೇಜು ವಿದ್ಯಾರ್ಥಿಗೆ ಪ್ರಶ್ನಾಪತ್ರಿಕೆ ಸಂಗ್ರಹವನ್ನು ನೀಡಬೇಕು ಎನ್ನಲಾಗಿದೆ.

ಕೇಂದ್ರದ ಪ್ರಸ್ತಾವನೆಗೆ ಸಿಗುತ್ತಾ ರಾಜ್ಯಗಳ ಮುದ್ರೆ..?

ಇಂದು ನಡೆದ ಸಂಸದೀಯ ಸಮಿತಿ ಸಭೆಯಲ್ಲಿ ಇಷ್ಟು ಮಾಹಿತಿ ಬಗ್ಗೆ ಪ್ರಸ್ತಾವನೆ ಮಾಡಲಾಗಿದೆ. ತನ್ನ ಅಭಿಪ್ರಾಯ ತಿಳಿಸಿರುವ ಕೇಂದ್ರ ಸರ್ಕಾರ ತಿಳಿಸಿದೆ. ಮಾನವ ಸಂಪನ್ಮೂಲ ಇಲಾಖೆ ಸಂಸದೀಯ ಸಮಿತಿ ರಾಜ್ಯಗಳ ಸಲಹೆ ಕೇಳಿ ಅಂತಿಮ ನಿರ್ಧಾರ ಪ್ರಕಟ ಮಾಡಲಿದೆ ಎನ್ನಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಮಕ್ಕಳ ಹಿತದೃಷ್ಟಿಯಿಂದ ಶಾಲಾ ಕಾಲೇಜುಗಳನ್ನು ತೆರೆಯುವ ಯಾವ ನಿರ್ಧಾರವನ್ನೂ ಮಾಡಲಾಗಿಲ್ಲ ಎಂದಿದ್ದಾರೆ.

ದಿನದಿಂದ ದಿನಕ್ಕೆ ಕರೋನಾ ಸೋಂಕು ದೇಶವ್ಯಾಪಿ ಹರಡುತ್ತಲೇ ಇದೆ. ಪ್ರತಿದಿನ ದೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಮಂದಿ ಹೊಸದಾಗಿ ಸೋಂಕಿಗೆ ತುತ್ತಾಗುತ್ತಲೇ ಇದ್ದಾರೆ. ಒಮ್ಮೆ ಶಾಲಾ ಕಾಲೇಜುಗಳು ಆರಂಭವಾದ ಬಳಿಕ ಕೆಲವರಿಗೆ ಸೋಂಕು ತಗುಲಿದರೆ ನೂರಾರು ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗುವ ಸಾಧ್ಯತೆ ಇರಲಿದೆ. ಇದು ಮತ್ತಷ್ಟು ಸೋಂಕು ಹೆಚ್ಚಳಕ್ಕೆ ದಾರಿ ಮಾಡಿಕೊಟ್ಟಂತಾಗಿದೆ ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನುತ್ತಿದ್ದಾರೆ ಶಿಕ್ಷಣ ತಜ್ಞರು.

ಅಂತಿಮ ನಿರ್ಧಾರ ಹೊರಡಿಸೋದು ಯಾವಾಗ..?

ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅರ್ಥಾತ್‌ ಶಿಕ್ಷಣ ಸಚಿವಾಲಯ ಈಗಾಗಲೇ ಶೂನ್ಯ ವರ್ಷ ಎಂದು ಘೋಷಣೆ ಮಾಡುವ ನಿರ್ಧಾರ ಮಾಡಿದ್ದು, ಕೇಂದ್ರ ಸರ್ಕಾರದ ಎದುರು ಇಡಲಾಗಿದೆ. ಆದರೆ ರಾಜ್ಯಗಳ ನಿರ್ಧಾರವನ್ನು ಕೇಳಿಕೊಂಡು ಆ ಬಳಿಕ ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಗೃಹ ಇಲಾಖೆ ಜೊತೆಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಪ್ರಕಟ ಮಾಡಲಾಗುವುದು ಎಂದಿದ್ದಾರೆ. ಅಂದರೆ ದೇಶದಲ್ಲಿ ಸಾವಿರಾರು ಮಕ್ಕಳಿಗೆ ಕರೋನಾ ಸೋಂಕು ಬಂದರೆ ಚಿಕಿತ್ಸೆ ಕೊಡುವಷ್ಟು ಮೂಲಸೌಕರ್ಯ ಇದೆಯಾ..? ಶಿಕ್ಷಣ ವ್ಯವಸ್ಥೆಯಲ್ಲಿ ಏನು ಮಾಡುಬೇಕು..? ಶೂನ್ಯ ವರ್ಷದಿಂದ ಆಗುವ ಅನಾನುಕೂಲಗಳು ಏನು ಎನ್ನುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಬಳಿಕ ಅಂತಿಮ ಅಧಿಸೂಚನೆ ಹೊರಬೀಳಲಿದೆ.

ಆದರೆ, ಈಗಾಗಲೇ ತೆಲಂಗಾಣ ಸರ್ಕಾರ ಶಾಲಾ ಕಾಲೇಜು ಆರಂಭ ನಿರ್ಧಾರ ಮಾಡಿದೆ, ಮುಂಜಾಗ್ರತಾ ಕ್ರಮ ತೆಗೆದುಕೊಂಡು ಶಾಲೆಗಳನ್ನು ಆರಂಭಿಸುವುದು ಸೂಕ್ತ ಎನ್ನುವ ಮಾಹಿತಿಯನ್ನು ತಜ್ಞರು ನೀಡಿದ್ದಾರೆ. ಇನ್ನೂ ಹಲವಾರು ರಾಜ್ಯಗಳು ಶಾಲಾ ಕಾಲೇಜು ಆರಂಭದ ಬಗ್ಗೆ ಕೇಂದ್ರದ ನಿರ್ಧಾರಕ್ಕಾಗಿ ಕಾಯುತ್ತಿವೆ. ಇದೀಗ ಕೇಂದ್ರ ಸರ್ಕಾರ ಅಭಿಪ್ರಾಯ ಕೇಲಲು ಮುಂದಾಗಿದ್ದು, ಬಹುತೇಕ ರಾಜ್ಯಗಳ ನಿರ್ಧಾರ ಏನಾಗಿರಲಿದೆ ಎನ್ನುವುದರ ಮೇಲೆ ಅಂತಿಮ ನಿರ್ಣಯ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ.

Previous Post

ಪತ್ನಿಯ ಹೆರಿಗೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಿಸಿ ಮಾದರಿಯಾದ ಗದಗ್ ಜಿಲ್ಲಾಧಿಕಾರಿ

Next Post

BSNL ಉದ್ಯೋಗಿಗಳು ದೇಶದ್ರೋಹಿಗಳಾದರೆ ಸರ್ಕಾರ ಸಂಬಳ ನೀಡುವುದು ಯಾಕೆ?

Related Posts

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?
Top Story

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

by ಪ್ರತಿಧ್ವನಿ
April 14, 2026
0

ಪ್ರತಿಧ್ವನಿ ವಿಶೇಷ ವರದಿ..  ಬೆಂಗಳೂರು : ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು ನಾನಾ ವಿವಾದಗಳನ್ನು ಹಾಗೂ ಸಮಸ್ಯೆಗಳಿಗೆ ಕಾರಣವಾಗಿದೆ. ಸದ್ಯ ಚುನಾವಣೆಯ...

Read moreDetails
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
Next Post
BSNL ಉದ್ಯೋಗಿಗಳು ದೇಶದ್ರೋಹಿಗಳಾದರೆ ಸರ್ಕಾರ ಸಂಬಳ ನೀಡುವುದು ಯಾಕೆ?

BSNL ಉದ್ಯೋಗಿಗಳು ದೇಶದ್ರೋಹಿಗಳಾದರೆ ಸರ್ಕಾರ ಸಂಬಳ ನೀಡುವುದು ಯಾಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada