ಕರ್ನಾಟಕದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಇದ್ದಂತಹ ಗೊಂದಲಗಳಿಗೆ ಸಿಎಂ ಯಡಿಯೂರಪ್ಪನವರು ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಶಾಲೆಗಳನ್ನು ತೆರೆಯುವ ಕುರಿತಾಗಿ ಇರುವಂತಹ ವದಂತಿಗಳಿಗೆ ಕಿವಿಗೊಡುವುದು ಬೇಡ ಎಂದು ಪೋಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
“ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಲನ್ನು ಆರಂಭಿಸುವ ಮುನ್ನ ಎಲ್ಲ ಪಕ್ಷದ ಮುಖಂಡರು, ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆದು ಸಾಧಕ ಬಾಧಕಗಳನ್ನು ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು,” ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆ ಹೊರಡಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಶಾಲೆ ತೆರೆಯುವ ಕುರಿತಾಗಿ ನಡೆಯುತ್ತಿರುವ ಪರ ವಿರೋಧ ಚರ್ಚೆಗಳು, ಮಾಧ್ಯಮಗಳ ಅಭಿಯಾನಗಳು ಮತ್ತು ರಾಜಕೀಯ ಪಕ್ಷದ ನಾಯಕರ ನಿಲುಗಳನ್ನು ಗಮನಿಸಲಾಗಿದೆ ಎಂದು ಅವರು ಹೇಳಿದ್ದಾರೆ.