ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ನಡೆದ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಿರಾ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ರಾಜಣ್ಣ ಅವರೇ ಟಿ.ಬಿ ಜಯಚಂದ್ರರನ್ನು ಅಭ್ಯರ್ಥಿಯನ್ನಾಗಿ ಸೂಚಿಸಿದ್ದಾರೆ. ಅವರ ಸಲಹೆಯನ್ನು ಪಡೆದಿದ್ದು, ಈ ತೀರ್ಮಾನವನ್ನೇ ಪಕ್ಷದ ಹೈಕಮಾಂಡ್ಗೆ ಕಳುಹಿಸಿಕೊಡುತ್ತೇವೆ’ ಎಂದು ತಿಳಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಹೇಳಿಕೆಯ ಪ್ರಕಾರ, ಟಿಕೆಟ್ ಹಂಚಿಕೆ ಕುರಿತಂತೆ ಪಕ್ಷದ ಆಂತರಿಕ ಬಿಕ್ಕಟ್ಟು ಶಮನಗೊಂಡಿದೆ. ಶಿರಾ ಉಪಚುನಾವಣೆಗೆ ಮಾಜಿ ಶಾಸಕ ಕೆ. ಎನ್ ರಾಜಣ್ಣ ಕೂಡಾ ಆಕಾಂಕ್ಷಿಯಾಗಿದ್ದರು. ಕೆ ಎನ್ ರಾಜಣ್ಣರನ್ನು ಸಮಾಧಾನಿಸಲು ಡಿಕೆ ಶಿವಕುಮಾರ್ ಸಿದ್ಧರಾಮಯ್ಯ ಅವರ ಸಹಾಯವನ್ನು ಕೋರಿದ್ದರು.
Also Read: ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ ಒಳಗೆ ಭಿನ್ನಮತದ ಹೊಗೆ..!
‘ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು. ಶಿರಾ ಉಪಚುನಾವಣೆಯನ್ನು ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಎದುರಿಸಲು ತೀರ್ಮಾನಿಸಲಾಗಿದೆ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕೋ ಚೇರ್ಮನ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಪ್ರಚಾರ ಕಾರ್ಯ ಪ್ರಾರಂಭಿಸುತ್ತೇವೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.