ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿಂದು ನಡೆದ ಮಹಾಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ್ ಬಿದರಿ ತಿಳಿಸಿದ್ದಾರೆ.
ಇದನ್ನೂ ಓದಿ : ದಾವೋಸ್ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಖಂಡ್ರೆ ಅವರ ಆಯ್ಕೆಯಾಗಿದ್ದು, ಅವರು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲರೂ ಒಮ್ಮತದಿಂದ ಈ ಆಯ್ಕೆಯನ್ನು ಬೆಂಬಲಿಸಿದ್ದಾರೆ ಎಂದು ಬಿದರಿ ಹೇಳಿದ್ದಾರೆ.

ಇನ್ನೂ ತಮ್ಮ ಆಯ್ಕೆಗೆ ಕಾರಣರಾದ ಎಲ್ಲರಿಗೂ ಸಚಿವ ಈಶ್ವರ್ ಖಂಡ್ರೆ ಧನ್ಯವಾದಗಳನ್ನು ತಿಳಿಸಿದ್ದಾರೆ. ನಮಗೆ ಲಿಂಗಾಯತ ಹಾಗೂ ವೀರಶೈವ ಪ್ರತ್ಯೇಕವಲ್ಲ, ಎಲ್ಲರನ್ನೂ, ಸಮಾಜದ ಎಲ್ಲ ವರ್ಗಗಳನ್ನು ಒಂದೆಡೆ ಸೇರಿಸಿಕೊಂಡು ಸಮಾಜದ ಸರ್ವಾಂಗೀಣ ಏಳ್ಗೆಗಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.











