ಮೂರನೇ ಅವಧಿಯ ಲಾಕ್‌ಡೌನ್ ಸಂದರ್ಭದಲ್ಲಿ ಕೆಂಪು ವಲಯವೆಂದು ಗುರುತಿಸಲ್ಪಟ್ಟಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಅತ್ಯಗತ್ಯ ಸೇವೆಯನ್ನು ಒದಗಿಸುತ್ತಿರುವ ಸರ್ಕಾರಿ ಇಲಾಖೆಗಳಲ್ಲಿನ ಕಛೇರಿಗಳಲ್ಲಿ ಶೇಕಡಾ 100ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ಮಟ್ಟದ ಅಧಿಕಾರಿಗಳು ಕರ್ತವ್ಯ ನಿರ್ಹಿಸಬೇಕು ಎಂದು ಸರ್ಕಾರವು ಅಧಿಕೃತ ಸುತ್ತೋಲೆ ಹೊರಡಿಸಿದೆ.
ಉಳಿದ ಇಲಾಖೆಗಳಲ್ಲಿನ ಗ್ರೂಪ್ ಎ ಮತ್ತು ಬಿ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಶೇಕಡಾ 33ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇನ್ನು ಮೇ 4, 2020ರಿಂದ ಜಾರಿಗೆ ಬರುವಂತೆ ಹಸಿರು ವಲಯ ಮತ್ತು ಕಿತ್ತಳೆ ವಲಯದಲ್ಲಿರುವ ಎಲ್ಲಾ ಸರ್ಕಾರಿ ಕಛೇರಿಗಳ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಲು ತಿಳಿಸಲಾಗಿದೆ.