ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳಿಗೆ ಕರೋನಾ ಸೋಂಕು ವ್ಯಾಪಿಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಬಿ.ಎಸ್ ಯಡಿಯೂರಪ್ಪ ಅವರೇ ಟ್ವೀಟ್ ಮಾಡಿ ಮಾಹಿತಿ ಕೊಟ್ಟಿದ್ದು, ಕರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಭಾನುವಾರ ರಾತ್ರಿ ಟ್ವೀಟ್ ಮಾಡಿ ಮಾಡಿದ್ದರು. ಆ ಬಳಿಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯಪಾಲರಿಗೆ ಶುರುವಾಗಿದೆ ಭಾರೀ ಟೆನ್ಷನ್..!
ಮುಖ್ಯಮಂತ್ರಿಗೆ ಕರೋನಾ ಪಾಸಿಟಿವ್ ಬಂದಿರೋದ್ರಿಂದ ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಕಳೆದ ಶುಕ್ರವಾರ ಅಷ್ಟೇ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಸಿಎಂ ಬಿ.ಎಸ್ ಯಡಿಯೂರಪ್ಪ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಗೆ ಡಿಸಿಎಂ ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಇದ್ದರು. ಇದೀಗ ರಾಜ್ಯಪಾಲರು, ಡಿಸಿಎಂ ಅಶ್ವತ್ಥ ನಾರಾಯಣ ಹಾಗೂ ಬಸವರಾಜ ಬೊಮ್ಮಾಯಿ ಕೂಡ ಕ್ವಾರಂಟೇನ್ ಆಗಬೇಕಾಗಿದೆ. ಆ ಬಳಿಕ ಕಿಯೋನಿಕ್ಸ್ ವೇರ್ ಹೌಸಿಂಗ್, ಇನ್ ಕ್ಯೂಬೇಷನ್ ಮತ್ತು ಸ್ಟಾರ್ಟಪ್ ಸಂಸ್ಥೆಗಳ ಸೌಲಭ್ಯಕ್ಕಾಗಿ ನಿರ್ಮಿಸಲಾದ ನೂತನ ಕಟ್ಟಡ ಉದ್ಘಾಟನೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿ, ಭಾಷಣ ಮಾಡಿದ್ರು. ಮಧ್ಯಾಹ್ನ ಪುತ್ರ ವಿಜಯೇಂದ್ರ ಮನೆಗೆ ಭೇಟಿ ನೀಡಿ ವರಮಹಾಲಕ್ಷ್ಮೀ ಹಬ್ಬದ ಊಟ ಸವಿದಿದ್ದರು. ಸಂಜೆ ಕಸ್ತೂರಿ ರಂಗನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಶನಿವಾರ ಹಾಗೂ ಭಾನುವಾರ ಮನೆಯಲ್ಲೇ ಉಳಿದಿದ್ದ ಸಿಎಂ ಬಿ.ಎಸ್ ಯಡಿಯೂರಪ್ಪ ರಾತ್ರಿ ಮಣಿಪಾಲ್ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಷ್ಟೇ ಅಲ್ಲದೆ ಕಂದಾಯ ಸಚಿವ ಆರ್ ಅಶೋಕ್, ವಿ ಸೋಮಣ್ಣ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಶಾಸಕರಾದ ಶಂಕರ ಮುನೇನಕೊಪ್ಪ ಹಾಗೂ ಹರಿಶ್ ಪುಂಜಾ, ಎಂ.ಪಿ ಕುಮಾರಸ್ವಾಮಿ, ಸೇರಿದಂತೆ ಕೆಲವರ ಜೊತೆ ಸಿಎಂ ಚರ್ಚೆ ನಡೆಸಿದ್ದರು. ಡಿಸಿಎಂ ಲಕ್ಷ್ಮಣ ಸವದಿ ಕೂಡ ದೆಹಲಿಯಿಂದ ವಾಪಸ್ಆದ ಬಳಿಕ ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿಯನ್ನು ಒಳಗೊಂಡ ಅಂಕಿ ಅಂಶಗಳ ಸಂಚಿಕೆಯನ್ನುಸಿಎಂ ಬಿಎಸ್ಯಡಿಯೂರಪ್ಪ ಜುಲೈ ೩೦ ರಂದು ಬಿಡುಗಡೆ ಮಾಡಿದ್ದರು. ಸಚಿವರಾದ ಭೈರತಿ ಬಸವರಾಜ್, ಕೋಟಾ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್. ಅಶೋಕ್, ಶಾಸಕರಘುಪತಿ ಭಟ್, ಮೀನುಗಾರಿಕೆ ಇಲಾಖಾ ಅಧಿಕಾರಿಗಳು, ಫಲಾನುಭವಿಗಳು ಹಾಜರಿದ್ದರು. ಇದೀಗ ಸಿಎಂ ಬಿ.ಎಸ್ಯಡಿಯೂರಪ್ಪ ಅವರಿಗೆ ಕರೋನಾ ಪಾಸಿಟಿವ್ ಬಂದಿರುವುದರಿಂದ ಸಾಕಷ್ಟು ಜನರಿಗೆ ಆಪತ್ತಿನ ಭೀತಿಯುಂಟಾಗಿದೆ.
ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಶುಭ ಹಾರೈಕೆ..!
ಸಿಎಂ ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ಬಂದಿರುವುದರಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಯಡಿಯೂರಪ್ಪ ಶೀಘ್ರವಾಗಿ ಗುಣಮುಖರಾಗಲೆಂದು ಬಯಸುತ್ತೇನೆ. ಜೊತಗೆ ಉತ್ತಮ ಆರೋಗ್ಯದೊಂದಿಗೆ ಮರಳುತ್ತಾರೆ. ರಾಜ್ಯದ ಜನರಿಗಾಗಿ ತಮ್ಮ ಕೆಲಸವನ್ನು ಮುಂದುವರಿಸಲಿ ಎಂದು ಶುಭ ಕೋರಿದ್ದಾರೆ. ಕಾಂಗ್ರೆಸ್ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಡಾ. ಜಿ ಪರಮೇಶ್ವರ್, ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಈಶ್ವರ ಖಂಡ್ರೆ ಸೇರಿದಂತೆ ಸಾಕಷ್ಟು ರಾಜಕೀಯ ನಾಯಕರು ಆದಷ್ಟು ಭೇಗ ಗುಣಮುಖರಾಗಲೆಂದು ಶುಭ ಹಾರೈಸಿದ್ದಾರೆ. ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ರವರಿಗೆ ಕೋವಿಡ್ ಸೋಂಕು ತಗುಲಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಹುಟ್ಟು ಹೋರಾಟಗಾರರಾದ ಬಿ.ಎಸ್ ಯಡಿಯೂರಪ್ಪ ಅವರು ಕರೋನಾ ವಿರುದ್ಧದ ಹೋರಾಟದಲ್ಲಿ ಜಯಗಳಿಸಿ, ಗುಣಮುಖರಾಗಿ ಮರಳಲಿ ಎಂಎದು ಟವೀಟ್ ಮಾಡಿದ್ದಾರೆ ಸಚಿವ ರಮೇಶ್ ಜಾರಕಿಹೊಳಿ.

ಅಧಿಕಾರದ ಚುಕ್ಕಾಣಿ ಯಾರು ನೋಡಿಕೊಳ್ತಾರೆ..?
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ಬಂದಿರುವ ಕಾರಣ ತಾತ್ಕಾಲಿವಾಗಿ ಹುದ್ದೆಯನ್ನು ವಹಿಸಿಕೊಳ್ಳಬೇಕಿತ್ತು. ಆದರೆ ಡಿಸಿಎಂಗಳಾದ ಅಶ್ವತ್ಥ ನಾರಾಯಣ ಹಾಗೂ ಲಕ್ಷ್ಮಣ ಸವದಿ ಕೂಡ ಸಿಎಂ ಯಡಿಯೂರಪ್ಪ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇರುವ ಕಾರಣ ಹೋಂ ಕ್ವಾರಂಟೈನ್ ಆಗುತ್ತಿದ್ದಾರೆ. ಇನ್ನೋರ್ವ ಡಿಸಿಎಂ ಗೋವಿಂದ ಕಾರಜೋಳ ಅವರಿಗೂ ವಯಸ್ಸಾಗಿದ್ದು, ಆಡಳಿತ ನಡೆಸಲು 15 ದಿನಗಳ ಕಾಲ ಅಧಿಕಾರಿಗಳ ಸಂಪರ್ಕದಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರದ ಜವಾಬ್ದಾರಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಕಾರ್ಯಕಲಾಪಗಳನ್ನು ನೋಡಿಕೊಳ್ಳಲಿದ್ದಾರೆ. ಆದರೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಸಾಕಷ್ಟು ಹಿರಿಯ ಅಧಿಕಾರಿಗಳು ಇದ್ದಾರೆ ಎನ್ನಲಾಗಿದೆ. ಇತ್ತೀಚಿಗಷ್ಟೇ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಕಮಲ್ ಪಂಥ್ ಅವರೂ ಭೇಟಿಯಾಗಿದ್ದು, ಇನ್ನೆಷ್ಟು ಜನರಿಗೆ ಸೋಂಕು ತಗುಲಿದೆಯೋ ಎನ್ನುವ ಆತಂಕ ಮನೆ ಮಾಡಿದೆ.











