• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಿಎಬಿ ಮೂಲಕ ಮೈಮೇಲೆ ಕಿಚ್ಚು ಹಚ್ಚಿಕೊಂಡ ಕೇಂದ್ರ

by
December 15, 2019
in ದೇಶ
0
ಸಿಎಬಿ ಮೂಲಕ ಮೈಮೇಲೆ ಕಿಚ್ಚು ಹಚ್ಚಿಕೊಂಡ ಕೇಂದ್ರ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಶಾನ್ಯ ರಾಜ್ಯಗಳ ಹೊತ್ತಿ ಉರಿಯುತ್ತಿವೆ. ಇದೊಂದು ಸಂವಿಧಾನ ವಿರೋಧಿ ಕಾಯ್ದೆ, ಕೆಲವೇ ಕೆಲವು ಧರ್ಮಗಳನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು ನೆಲೆಸಿರುವ ಮುಸ್ಲಿಂರನ್ನು ಕಡೆಗಣಿಸಿ ಕೇವಲ ಕೆಲವೇ ಧರ್ಮಗಳ ಅಕ್ರಮ ವಲಸಿಗರಿಗೆ ಮಣೆ ಹಾಕಲಾಗಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆಗಳು ತಾರಕಕ್ಕೇರುತ್ತಿವೆ.

ADVERTISEMENT

ಅಸ್ಸಾಂ, ಮೇಘಾಲಯ, ಪಶ್ಚಿಮಬಂಗಾಳ, ದೆಹಲಿ, ಅರುಣಾಚಲ ಪ್ರದೇಶ ಸೇರಿದಂತೆ ಮತ್ತಿತರೆ ರಾಜ್ಯಗಳಲ್ಲಿ ಸಾರ್ವಜನಿಕರು, ವಿವಿಧ ಪಕ್ಷಗಳ ಪರ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಉದ್ದೇಶಪೂರ್ವಕವಾಗಿಯೇ ಮುಸ್ಲಿಂರನ್ನು ಕಡೆಗಣಿಸಿದೆ. ಈ ಮೂಲಕ ಸಂವಿಧಾನದ 14 ನೇ ವಿಧಿಯ ಆಶಯಕ್ಕೆ ಧಕ್ಕೆಯನ್ನುಂಟು ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.

ಅಸ್ಸಾಂನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಲ್ಲಿ ಪೊಲೀಸ್ ಠಾಣೆ, ರೈಲ್ವೆ ನಿಲ್ದಾಣಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಆದರೆ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವಿನಿಂದ ಹಿಂದೆ ಸರಿಯುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.

ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದಾಗಿ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಅಸ್ಸಾಂನ ರಾಜವಂಶಸ್ಥ ಕಿರೀಟ್ ಪ್ರದ್ಯೋತ್ ದೇಬ್ ಬರ್ಮನ್ ಅವರು ತಮ್ಮನ್ನು ಭೇಟಿ ಮಾಡಿದ ಅಮಿತ್ ಶಾಗೆ ಸೊಪ್ಪು ಹಾಕಿಲ್ಲ. ಪ್ರತಿಭಟನೆಯನ್ನು ಹಿಂಪಡೆದು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಿಕೊಂಡ ಮನವಿಗೂ ಡೋಂಟ್ ಕೇರ್ ಅಂದಿದ್ದಾರೆ ರಾಜವಂಶಸ್ಥ.

ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ಕಾನೂನಾಗಿ ಜಾರಿಗೊಳಿಸಲು ಬಿಡುವುದಿಲ್ಲ. ಸಂಧಾನ ಅಥವಾ ರಾಜೀ ಮಾತೇ ಇಲ್ಲ. ಕೇಂದ್ರ ಸರ್ಕಾರದ ಈ ಉದ್ದೇಶಿತ ಕಾನೂನಿನ ವಿರುದ್ಧ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸುತ್ತೇವೆ ಎಂದು ಕಿರೀಟ್ ಪ್ರದ್ಯೋತ್ ದೇಬ್ ಬರ್ಮನ್ ಸ್ಪಷ್ಟ ಮಾತುಗಳಲ್ಲಿ ಅಮಿತ್ ಶಾಗೆ ಹೇಳಿ ಕಳಿಸಿರುವುದು ಕೇಂದ್ರಕ್ಕೆ ಇರಿಸು ಮುರಿಸು ಉಂಟುಮಾಡಿದೆ.

ರಾಜ್ಯ ಸರ್ಕಾರಗಳಿಂದಲೂ ತೀವ್ರಗೊಂಡ ವಿರೋಧ

ಇನ್ನು ದೆಹಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪಂಜಾಬ್ ಮತ್ತು ಚತ್ತೀಸ್ ಗಢ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಈ ಉದ್ದೇಶಿತ ಕಾನೂನಿಗೆ ವಿರೋಧವನ್ನು ಮುಂದುವರಿಸಿದ್ದಾರೆ.

ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್, ಪಂಜಾಬಿನ ಅಮರಿಂದರ್ ಸಿಂಗ್, ಮಧ್ಯಪ್ರದೇಶದ ಕಮಲನಾಥ್ ಮತ್ತು ಚತ್ತೀಸ್ ಗಢದ ಭೂಪೇಂದ್ರ ಬಘೇಲಾ ಆರಂಭದಿಂದಲೂ ಈ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದರು. ಇವರ ಸಾಲಿಗೆ ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿಕೊಂಡಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ವಿರೋಧದ ಹೊರತಾಗಿಯೂ ಕಾನೂನನ್ನು ಜಾರಿಗೆ ತಂದರೆ ನಮ್ಮ ರಾಜ್ಯಗಳಲ್ಲಿ ಅದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಘೋಷಿಸಿರುವ ಈ ಆರೂ ಮುಖ್ಯಮಂತ್ರಿಗಳು ಕಾಯ್ದೆಯನ್ನು ರದ್ದುಪಡಿಸಲು ಕಾನೂನು ವ್ಯಾಪ್ತಿಯಲ್ಲಿ ಅಗತ್ಯವಾದ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನಕ್ಕೆ ವಿರುದ್ಧವಾಗಿರುವ ಈ ಕಾನೂನನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಇದು ಸಂವಿಧಾನದ ಆಶಯವನ್ನೇ ಬುಡಮೇಲು ಮಾಡುವಂತಹ ಕಾನೂನಾಗಲಿದೆ. ಅಲ್ಲದೇ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಭಗತ್ ಸಿಂಗ್ ಅವರ ಸಮಗ್ರ ಭಾರತದ ಪರಿಕಲ್ಪನೆಗೆ ಧಕ್ಕೆ ತರುವಂತಹ ಕಾನೂನಾಗಿದೆ. ಆದ್ದರಿಂದ ನಾವು ಯಾವುದೇ ಕಾರಣಕ್ಕೂ ಇಂತಹ ಕಾನೂನನ್ನು ನಮ್ಮ ರಾಜ್ಯಗಳಲ್ಲಿ ಜಾರಿಗೆ ಬರಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದು ನಿಂತಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಬಿಜೆಪಿ ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡಲು ಹೊರಟಿದೆ. ಬಿಜೆಪಿ ತನಗೆ ತೋಚಿದಂತೆ ಮಾಡುತ್ತಿದೆ ಮತ್ತು ಧರ್ಮ ಮತ್ತು ಜಾತಿ ಹೆಸರಿನಲ್ಲಿ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದೆ. ದೇಶದಲ್ಲಿ ಈರುಳ್ಳಿ ಬೆಲೆ ಕೆಜಿಗೆ 150 ರೂಪಾಯಿವರೆಗೆ ಹೆಚ್ಚಳವಾಗಿದೆ ಈ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿಲ್ಲ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆ ತರಲು ಹೊರಡುವ ಮೂಲಕ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂಬುದು ಈ ಮುಖ್ಯಮಂತ್ರಿಗಳ ಆರೋಪ.

ಈ ಮಧ್ಯೆ ಕಾಂಗ್ರೆಸ್ ಪಕ್ಷ ದೇಶಾದ್ಯಂತ `ಭಾರತ ಉಳಿಸಿ’ ಆಂದೋಲನಕ್ಕೆ ಕರೆ ಕೊಟ್ಟಿರುವುದು ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

Tags: Arvind KejriwalChief MinistersCitizenship Amendment ActConstitutionOpposingParliamentreligion and casteಅರವಿಂದ ಕೇಜ್ರಿವಾಲಧರ್ಮ ಮತ್ತು ಜಾತಿಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಮುಖ್ಯಮಂತ್ರಿಗಳುವಿರೋಧಸಂವಿಧಾನಸಂಸತ್ತು
Previous Post

ಸಂಪುಟ ವಿಸ್ತರಣೆ ವಿಳಂಬಕ್ಕೆ ಜಾರ್ಖಂಡ್ ಚುನಾವಣೆ ನೆಪವಷ್ಟೆ

Next Post

ದಿನೇ ದಿನೆ ಕಲುಷಿತಗೊಳ್ಳುತ್ತಿರುವ ನಾಡಿನ ಜೀವ ನದಿ ಕಾವೇರಿ

Related Posts

Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
0

ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ, ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವರಿಗೆ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ...

Read moreDetails

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025
Next Post
ದಿನೇ ದಿನೆ ಕಲುಷಿತಗೊಳ್ಳುತ್ತಿರುವ ನಾಡಿನ  ಜೀವ ನದಿ ಕಾವೇರಿ

ದಿನೇ ದಿನೆ ಕಲುಷಿತಗೊಳ್ಳುತ್ತಿರುವ ನಾಡಿನ ಜೀವ ನದಿ ಕಾವೇರಿ

Please login to join discussion

Recent News

Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada