ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕರೋನಾ ಸೋಂಕು ಇರುವುದು ಧೃಡಪಟ್ಟಿದೆ.
“ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.” ಎಂದು ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪರನ್ನು ದಾಖಲಿಸಿರುವ ಮಣಿಪಾಲ್ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯನವರನ್ನೂ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.