ಕರ್ನಾಟಕ ಬಿಜೆಪಿಯು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮೇಲೆ ನೋಟೀಸ್ ಕಳುಹಿಸಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿದಕ್ಕಾಗಿ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟೀಸಿನಲ್ಲಿ ಹೇಳಿದೆ.
ಕೋವಿಡ್ ಹಿನ್ನಲೆಯಲ್ಲಿ ಖರೀದಿಸಿದ ವೈದ್ಯಕೀಯ ಉಪಕರಣಗಳಲ್ಲಿ ಹಗರಣ ನಡೆದಿದೆಯೆಂದು ಆರೋಪಿಸಿರುವ ಕೃತ್ಯಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ನೋಟೀಸಿನಲ್ಲಿ ಹೇಳಲಾಗಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಳೆದ ಕೆಲವು ದಿನಗಳಿಂದ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಸರ್ಕಾರದ ವಿರುದ್ಧ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಕುರಿತು ನ್ಯಾಯಾಂಗ ತನಿಖೆ ಆಗಬೇಕೆಂದು ಇಬ್ಬರೂ ಆಗ್ರಹಿಸಿದ್ದಾರೆ.
ಕೋವಿಡ್ -19 ಹಿನ್ನಲೆಯಲ್ಲಿ ಸರ್ಕಾರ 4,157 ಕೋಟಿ ರೂ. ಖರ್ಚು ಮಾಡಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿಕೊಂಡಿದ್ದಾರೆ, ಅಲ್ಲದೆ ಅವರು ಬರೆದ 20 ಪತ್ರಗಳಿಗೆ ಯಾವುದಕ್ಕೂ ಸರ್ಕಾರ ಸ್ಪಂದಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ, ಪ್ರತಿಪಕ್ಷಗಳಿಗೆ ಸರ್ಕಾರ ಯಾವುದೇ ಉತ್ತರವನ್ನು ನೀಡದಿದ್ದರೆ, ಅವರು ಈ ಅಂಕಿಅಂಶಗಳನ್ನು ಎಲ್ಲಿಂದ ಪಡೆದರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಕೇಳಿದ್ದಾರೆ.
ಸರ್ಕಾರದ ವಿರುದ್ಧ ಆರೋಪಿಸಿರುವಂತೆ ಯಾವುದೇ ಭ್ರಷ್ಟಾಚಾರವಾಗಿಲ್ಲ. ಸರ್ಕಾರದ, ಪಕ್ಷದ ಪ್ರತಿಷ್ಟೆಗೆ ಕುತ್ತು ತರಲು ಕಾಂಗ್ರೆಸ್ ಈ ಆರೋಪ ಮಾಡುತ್ತಿದೆ ಎಂದೂ ಅವರು ಹೇಳಿದ್ದಾರೆ.