ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಪೋಲಿಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ KPCC ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಶಿವಮೊಗ್ಗದ ಸಾಗರ ಪಟ್ಟಣದಲ್ಲಿ ವಕೀಲರೊಬ್ಬರು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್‌ನ ಉಳಿದ ನಾಯಕರ ಮೇಲೆ ದೂರು ದಾಖಲಿಸಿದ್ದರು. ಕಾಂಗ್ರೆಸ್ ನೇತಾರರ ವಿರುದ್ಧದ ದೂರಿನಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಸರ್ಕಾರ ಹಾಗೂ ಪ್ರಧಾನಿ ಮೋದಿಯ ವಿರುದ್ಧ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿಲಾಗಿತ್ತು.
ಈ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಆದ್ಯಕ್ಷೆ ಹಾಗೂ ಇತರೆ ನೇತಾರರ ಮೇಲೆ ಸೆಕ್ಷನ್ 153 ಹಾಗೂ ಸೆಕ್ಷನ್ 505 ಅಡಿಯಲ್ಲಿ ಶಿವಮೊಗ್ಗ ಪೋಲಿಸರು ಪ್ರಕರಣ ದಾಖಲಿಸಿದ್ದರು.
Also Read: PM-CARES ಕುರಿತ ಕಾಂಗ್ರೆಸ್ ಟ್ವೀಟ್; ಶಿವಮೊಗ್ಗದಲ್ಲಿ ಸೋನಿಯಾ ಗಾಂಧಿ ವಿರುದ್ಧ FIR!
ಪ್ರಕರಣ ದಾಖಲಿಸಿರುವುದನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕರಣವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ರಾಜಕೀಯ ಪ್ರೇರಿತವಾಗಿ ನೀಡಿರುವ ಸುಳ್ಳು ಮಾಹಿತಿಯ ದೂರಿನನ್ವಯ, ಪೋಲಿಸ್ ಅಧಿಕಾರಿ ತಮ್ಮ ಅಧಿಕಾರ ಬಳಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಅಧಿಕಾರ ದುರುಪಯೋಗಿಸಿಕೊಂಡ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.