ಕರೋನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವಾಗ ಜನರ ದೊಡ್ಡ ಸಭೆಯನ್ನು ತಪ್ಪಿಸಲು ಮತ್ತು ಸಾಮಾಜಿಕ ಅಂತರ ಕಾಪಾಡಲು ಹಾಗೂ ಮಾಸ್ಕ್ ಧರಿಸುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಉದಾತ್ತ ಸೇವೆಯನ್ನು ಗುರುತಿಸಿ ಸಮಾರಂಭದಲ್ಲಿ ವೈದ್ಯರು, ಆರೋಗ್ಯ ಮತ್ತು ನೈರ್ಮಲ್ಯ ಕಾರ್ಮಿಕರಂತಹ COVID-19 ಯೋಧರನ್ನು ಆಹ್ವಾನಿಸಬೇಕು ಎಂದು ಗೃಹ ಸಚಿವಾಲಯವು ಸಲಹೆಯೊಂದರಲ್ಲಿ ತಿಳಿಸಿದೆ. ಸೋಂಕಿನಿಂದ ಚೇತರಿಸಿಕೊಂಡ ಕೆಲವು ಜನರನ್ನು ಕೂಡಾ ಆಹ್ವಾನಿಸಬಹುದು ಎಂದು ಗೃಹ ಸಚಿವಾಲಯ ಹೇಳಿದೆ.
ಆದ್ದರಿಂದ, ಎಲ್ಲಾ ಕಾರ್ಯಕ್ರಮಗಳನ್ನು ಜನಸೇರುವಿಕೆಯನ್ನು ತಪ್ಪಿಸುವ ರೀತಿಯಲ್ಲಿ ಆಯೋಜಿಸಬೇಕು ಹಾಗೂ ಸಂದರ್ಭದ ಅನುಕೂಲಕ್ಕಾಗಿ ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಬಳಸಬಹುದು ಎಂದು ಸಲಹೆಗಾರರು ಹೇಳಿದ್ದಾರೆ. ಭಾಗವಹಿಸಲು ಸಾಧ್ಯವಾಗದ ಜನರನ್ನು ದೊಡ್ಡ ಪ್ರಮಾಣದಲ್ಲಿ ತಲುಪುವ ಸಲುವಾಗಿ ಆಯೋಜಿಸಲಾದ ಕಾರ್ಯಕ್ರಮಗಳನ್ನು ವೆಬ್-ಕಾಸ್ಟ್ ಮೂಲಕ ಪ್ರಸಾರ ಮಾಡಬಹುದು ಎಂದೂ ಸಲಹೆ ನೀಡಲಾಗಿದೆ..

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
