• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯನ್ನು ಜಾರಿಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

by
October 3, 2020
in ಕರ್ನಾಟಕ
0
ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯನ್ನು ಜಾರಿಗೊಳಿಸಬೇಕು - ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಾನು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜ್ ನೇತೃತ್ವದ ಆಯೋಗಕ್ಕೆ ಸಮೀಕ್ಷೆ ನಡೆಸುವ ಜವಾಬ್ದಾರಿ ವಹಿಸಿದ್ದೆ. ನಮ್ಮ ಅಧಿಕಾರಾವಧಿ ಮುಗಿಯುವುದರೊಳಗೆ ವರದಿ ಸಿದ್ಧಗೊಂಡಿರದ ಕಾರಣ ಅದರ ಬಿಡುಗಡೆ ಸಾಧ್ಯವಾಗಿಲ್ಲ. ಈಗ ವರದಿ ರಾಜ್ಯ ಸರ್ಕಾರದ ಮುಂದಿದೆ. ಇನ್ನಷ್ಟು ವಿಳಂಬ ಮಾಡದೆ ವರದಿಯನ್ನು ಬಿಡುಗಡೆ ಮಾಡಿ ಅದರ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಸಮ್ಮಿಶ್ರ ಸರ್ಕಾರದ ಕಾಲದಲ್ಲಿಯೇ ಶಾಶ್ವತ ಆಯೋಗ ವರದಿಯನ್ನು ಸಲ್ಲಿಸುವ ಪ್ರಯತ್ನ ಮಾಡಿದರೂ ಸರ್ಕಾರ ಆಸಕ್ತಿ ತೋರಿರಲಿಲ್ಲ. ಬಿ.ಎಸ್.ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಕೂಡಲೇ ಆಯೋಗವನ್ನು ವಜಾಗೊಳಿಸಿದರು. ಈ ಕಾರಣದಿಂದಾಗಿ ಆಯೋಗದ ಅಧ್ಯಕ್ಷರು ಆಯುಕ್ತರಿಗೆ ವರದಿ ಸಲ್ಲಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆದರೂ 1931ರ ನಂತರ ಜಾತಿಗಣತಿ ನಡೆದಿಲ್ಲ. ಇಂದಿರಾ ಸ್ಹಾನಿ ಪ್ರಕರಣದಲ್ಲಿ ಸುಪ್ರೀಮ್ ಕೋರ್ಟ್ ಎಲ್ಲ ರಾಜ್ಯಗಳಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚನೆಗೆ ಆದೇಶ ನೀಡಿತ್ತು. ನಾನು ಉಪಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲಿ ಪ್ರಥಮವಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸಿದ್ದೆ. ಈ ಆಯೋಗವು ರೂ.162 ಕೋಟಿ ಖರ್ಚಿನಲ್ಲಿ ಸುಮಾರು 1.78 ಲಕ್ಷ ಸರ್ಕಾರಿ ಸಿಬ್ಬಂದಿಯನ್ನು ಬಳಸಿಕೊಂಡು ಮನೆಮನೆಗೆ ಭೇಟಿ ನೀಡಿ 55 ವಿಷಯಗಳ ಮೇಲೆ ಪ್ರಶ್ನೆಗಳಿಗೆ ಉತ್ತರ ಪಡೆದು ಅತ್ಯಂತ ವೈಜ್ಞಾನಿಕವಾಗಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ ಎಂದಿದ್ದಾರೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರೂ.162 ಕೋಟಿ ಖರ್ಚಿನಲ್ಲಿ ಸುಮಾರು 1.78 ಲಕ್ಷ ಸರ್ಕಾರಿ ಸಿಬ್ಬಂದಿಯನ್ನು ಬಳಸಿಕೊಂಡು ಮನೆಮನೆಗೆ ಭೇಟಿ ನೀಡಿ 55 ವಿಷಯಗಳ ಮೇಲೆ ಪ್ರಶ್ನೆಗಳಿಗೆ ಉತ್ತರ ಪಡೆದು ಅತ್ಯಂತ ವೈಜ್ಞಾನಿಕವಾಗಿ ಈ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. 5/7#Pressmeet

— Siddaramaiah (@siddaramaiah) October 3, 2020


ಇದು ಕೇವಲ ಜಾತಿಗಳ ಸಮೀಕ್ಷೆಯೂ ಅಲ್ಲ, ಹಿಂದುಳಿದ ಜಾತಿಗಳ ಸಮೀಕ್ಷೆ ಅಲ್ಲ, ಇದು ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ,ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಸರ್ಕಾರವು ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಲು ಇದರಿಂದ ನೆರವಾಗುತ್ತದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಮೂಲಭೂತವಾಗಿ ಸಾಮಾಜಿಕ ನ್ಯಾಯ ಮತ್ತು ಅದರ ಭಾಗವಾದ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿದೆ. ಮಂಡಲ ಆಯೋಗದ ವರದಿ ಜಾರಿಯನ್ನು ವಿರೋಧಿಸಿ ದೇಶಕ್ಕೆ ಬೆಂಕಿ ಹಚ್ಚಿದ ಪಕ್ಷ ಇದು. ಈ ಕಳಂಕವನ್ನು ತೊಡೆದು ಹಾಕಲಿಕ್ಕಾದರೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಯೋಗದ ವರದಿಯನ್ನು ಒಪ್ಪಿಕೊಂಡು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಮೂಲಭೂತವಾಗಿ ಸಾಮಾಜಿಕ ನ್ಯಾಯ ಮತ್ತು ಅದರ ಭಾಗವಾದ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿದೆ. ಮಂಡಲ ಆಯೋಗದ ವರದಿ ಜಾರಿಯನ್ನು ವಿರೋಧಿಸಿ ದೇಶಕ್ಕೆ ಬೆಂಕಿ ಹಚ್ಚಿದ ಪಕ್ಷ ಇದು. ಈ ಕಳಂಕವನ್ನು ತೊಡೆದುಹಾಕಲಿಕ್ಕಾದರೂ ಮುಖ್ಯಮಂತ್ರಿ @BSYBJP ಅವರು ಆಯೋಗದ ವರದಿಯನ್ನು ಒಪ್ಪಿಕೊಂಡು ಜಾರಿಗೊಳಿಸಬೇಕು. 7/7#Pressmeet

— Siddaramaiah (@siddaramaiah) October 3, 2020


ADVERTISEMENT
Tags: ಸಾಮಾಜಿಕ ನ್ಯಾಯಸಿದ್ದರಾಮಯ್ಯಹಿಂದುಳಿದ ವರ್ಗ
Previous Post

ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆ; ಕೊಲೆಯಲ್ಲ- AIIMS ಮುಖ್ಯಸ್ಥ

Next Post

IPL ಆಟಗಾರನಿಗೆ ಫಿಕ್ಸಿಂಗ್‌ ಆಮಿಷ: ACU ನಿಂದ ತನಿಖೆ ಆರಂಭ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
IPL ಆಟಗಾರನಿಗೆ ಫಿಕ್ಸಿಂಗ್‌ ಆಮಿಷ: ACU ನಿಂದ ತನಿಖೆ ಆರಂಭ

IPL ಆಟಗಾರನಿಗೆ ಫಿಕ್ಸಿಂಗ್‌ ಆಮಿಷ: ACU ನಿಂದ ತನಿಖೆ ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada