ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಆದ್ರೆ ಬಹಳ ವಿಶೇಷ ಮತ್ತು ಅಚ್ಚರಿ ಎಂಬಂತೆ, ಪ್ರಧಾನಿ ನರೇಂದ್ರ ಮೋದಿ (Pm Narendra modi) ಕೂಡ ರಾಹುಲ್ ಗಾಂಧಿಯವರಿಗೆ ಜನ್ಮದಿನದ ಶುಭ ಕೋರಿದ್ದಾರೆ. ಲೋಕ ಸಭೆ ವಿಯೋಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು..ದೇವರು ಅವರಿಗೆ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನಾದೇಂದ್ರ ಮೋದಿಯವರ ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರೇ..ನಿಮ್ಮ ಶುಭಾಶಯಗಳಿಗೆ ನನ್ನ ಧನ್ಯವಾದಗಳು ಎಂದು ಮರು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರ ರಾಜಕಾರಣದಲ್ಲಿ ಬದ್ಧ ವೈರಿಗಳಾಗಿರುವ ಈ ಇಬ್ಬರು ನಾಯಕರು, ಅದೆಲ್ಲವನ್ನೂ ಪಕ್ಕಕ್ಕಿಟ್ಟು ಪರಸ್ಪರ ಶುಭಾಶಯ ಮತ್ತು ಧನ್ಯವಾದಗಳನ್ನು ವಿನಿಮಯ ಮಾಡಿಕೊಂಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನುಳಿದಂತೆ ನನ್ನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ನಿಮ್ಮೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ..ವಿಶ್ವಾಸ ಮತ್ತು ನಂಬಿಯನ್ನು ನಾನು ಉಳಿಸಿಕೊಳ್ಳಲು ಸದಾ ಶ್ರಮ ಹಾಕುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.