
ಆದಾಯ ತೆರಿಗೆ ಪಾವತಿ( Payment of income tax)ಮಾಡುವವರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಣ( Gruha lakshmi money)ಸಿಗುವುದಿಲ್ಲ.1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ.ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿ (Register Gruha lakshmi Yojana)ಇವರೆಲ್ಲರೂ ಪ್ರತಿ ತಿಂಗಳು ₹2,000 ಪಡೆಯುತ್ತಿದ್ದರು ಎಂದು ಸರ್ಕಾರ ಹೇಳಿದೆ. ಹೀಗಾಗಿ ಅಂಥವರಿಗೆ ಹಣ ನಿಲ್ಲಿಸಿ ದಾಖಲೆ ಪರಿಶೀಲಿಸುವ ಕೆಲಸಕ್ಕೆ ಚಾಲನೆ ನೀಡಿದೆ. ಆದಾಯ ತೆರಿಗೆ ಪಾವತಿಸುವವರು ಈ ಯೋಜನೆಗೆ ಅರ್ಹರಲ್ಲ ಎಂದು ಸರ್ಕಾರ ಈಗಾಗಲೇ ಹೇಳಿದೆ.