ದೇವರ ನೈವೇದ್ಯೆಕ್ಕಿಟ್ಟಿದ್ದ ಬಾದಾಮಿಯನ್ನು ಕದ್ದು ತಿಂದಿದ್ದಾನೆಂದು ಆರೋಪಿಸಿ ದಲಿತ ಸಮುದಾಯಕ್ಕೆ ಸೇರಿದ 11 ವರ್ಷದ ಬಾಲಕನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಜೈನ ಮಂದಿರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಬಾಲಕನ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಜೈನ ಮಂದಿರದ ಅರ್ಚಕ ರಾಕೇಶ್ ಜೈನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕನನ್ನು ಅರ್ಚಕ ಮರಕ್ಕೆ ಕಟ್ಟಿ ಥಳಿಸುತ್ತಿರುವುದು ಮತ್ತು ಬಾಲಕ ಸಹಾಯಕ್ಕೆ ಅಂಗಲಾಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.
ಬಾಲಕನನ್ನು ಥಳಿಸಲು ಅರ್ಚಕನ ಜೊತೆ ಮತ್ತೊಬ್ಬ ವ್ಯಕ್ತಿ ಸಹಾಯ ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದ್ದು ಆತನ ವಿರುದ್ದವು ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.
ಸದ್ಯ ಅರ್ಚಕ ಹಾಗೂ ಬಾಲಕನನ್ನು ಥಳಿಸಲು ಸಹಾಯ ಮಾಡಿದವರ ವಿರುದ್ದ ಜಾತಿ ನಿಂದನೆ ಪ್ರಕರಣವನ್ನ ದಾಖಲಿಸಲಾಗಿದೆ.
