• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ 10-15 ಕಾರ್ಮಿಕರು:ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಇತರೆ / Others
0
ಕಲ್ಲಿದ್ದಲು ಗಣಿಯಲ್ಲಿ  ಸಿಲುಕಿದ   10-15 ಕಾರ್ಮಿಕರು:ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
Share on WhatsAppShare on FacebookShare on Telegram

ಗುವಾಹಟಿ:ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಉಮ್ರಾಂಗ್ಶೋ ವ್ಯಾಪ್ತಿಯ ಟಿಂಕಿಲೋ ಪ್ರದೇಶದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ, ನೀರು hrid ಪರಿಣಾಮ 10-15 ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆ ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.

ADVERTISEMENT

ಘಟನೆಯಲ್ಲಿ ಕೆಲವು ಕಾರ್ಮಿಕರು ತಕ್ಷಣವೇ ಹೊರಬಂದಿರುವುದು ವರದಿಯಾಗಿದೆ. ಆದರೆ ಗಣಿ ಒಳಗೆ ಇನ್ನೂ 10 ರಿಂದ 15 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ. ದಿಮಾ ಹಸಾವೊ ಜಿಲ್ಲೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು, ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ತಲುಪಿ ಕಾರ್ಯಾಚರಣೆಯಲ್ಲಿ ತೊಡಗಿವೆ.

ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಮತ್ತು ಸಂಬಂಧಿತ ಅಧಿಕಾರಿಗಳು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸುತ್ತಿದ್ದಾರೆ. ಈ ಮಧ್ಯೆ, ಗಣಿಗಾರರು ಎಲ್ಲರೂ ಸುರಕ್ಷಿತವಾಗಿ ಹೊರಬರಲು ಜಿಲ್ಲಾಡಳಿತವು ಸೇನೆಯ ಸಹಾಯವನ್ನು ಕೋರಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, “ಉಮ್ರಾಂಗ್ಶೋದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂಬ ದುಃಖದ ಸುದ್ದಿ ನನ್ನನ್ನು ಕಳವಳಗೊಳಿಸಿದೆ.

Siddaramaiah: ನನ್ನ ಸತೀಶ್‌ ಊಟಕ್ಕೆ ಕರೆದಿದ್ದ..ನೀವು ಬನ್ನಿ ಊಟಕ್ಕೆ..! #sadhukokila #sandalwood

ಎಂಬ ದುಃಖದ ಸುದ್ದಿ ನನ್ನನ್ನು ಕಳವಳಗೊಳಿಸಿದೆ. ಎಲ್ಲಾ ಕಾರ್ಮಿಕರ ಸುರಕ್ಷತೆಗೆ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.ಸ್ಥಳೀಯ ಮೂಲಗಳ ಪ್ರಕಾರ, ಗಣಿಯಲ್ಲಿ 27ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಗಣಿಯಲ್ಲಿದ್ದ ನೀರು ಏಕಾಏಕಿ ಉಕ್ಕಿದ್ದು, ಕೆಲವು ಕಾರ್ಮಿಕರಿಗೆ ಹೊರಬರಲು ಸಾಧ್ಯವಾಗದ ಕಾರಣ ಹಲವರು ಒಳಗೇ ಸಿಲುಕಿದ್ದಾರೆ.

ರಕ್ಷಣಾ ತಂಡಗಳು ಗಣಿಯೊಳಗೆ ಕ್ಯಾಮರಾ ಕಳುಹಿಸಿ ಮತ್ತು ಆಮ್ಲಜನಕ ಪೂರೈಸುತ್ತಿವೆ. ಈ ಘಟನೆಯ ನಿಖರ ವಿವರ ಮತ್ತು ಅವಶ್ಯಕತೆಗಾಗಿ ರಕ್ಷಣಾ ತಂಡಗಳು ಹಗಲಿರುಳೆನೆಂದೂ ಕಾರ್ಯಾಚರಣೆಯನ್ನು ಮುಂದುವರಿಸುತ್ತಿವೆ.

Tags: 10-15 workers trappedAssam's Dima Hasaocoal mine in Tinkilo areaDistrict collectorDistrict Disaster Management Authoritguwahatirescue operation in progressSuperintendent of Police
Previous Post

ಗುಜರಾತ್ | ಕೊಳವೆ ಬಾವಿಗೆ ಬಿದ್ದ 19 ವರ್ಷದ ಬಾಲಕಿ!

Next Post

ನಕ್ಸಲರ ಶರಣಾಗತಿ ಯಾವಾಗ..? ಸಿಎಂ ಈ ಬಗ್ಗೆ ಹೇಳಿದ್ದೇನು..?

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ನಕ್ಸಲರ ಶರಣಾಗತಿ ಯಾವಾಗ..? ಸಿಎಂ ಈ ಬಗ್ಗೆ ಹೇಳಿದ್ದೇನು..?

ನಕ್ಸಲರ ಶರಣಾಗತಿ ಯಾವಾಗ..? ಸಿಎಂ ಈ ಬಗ್ಗೆ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!