ಬೆಂಗಳೂರು: ಅಕ್ರಮವಾಗಿ ವಿದೇಶದಿಂದ ಸಾಗಿಸಲಾಗುತ್ತಿದ್ದ ಅನಕೊಂಡಗಳನ್ನು ಇಲ್ಲಿಯ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆಯಲಾಗಿದೆ.

10 ಹಳದಿ ಬಣ್ಣದ ಅನಕೊಂಡಗಳನ್ನು ವಿದೇಶದಿಂದ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೂಡ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.

ಬ್ಯಾಂಕಾಕ್ ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ 10 ಅನಕೊಂಡಗಳು ಪತ್ತೆಯಾಗಿವೆ. ಸದ್ಯ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಲ್ಲದೇ, ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣದ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.