ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಜೀವದಹನಗೊಂಡ ಆಘಾತಕಾರಿ ಘಟನೆ ಮಧ್ಯಪ್ರದೇಶದ ಜಬಲಪುರದಲ್ಲಿ ಸಂಭವಿಸಿದೆ.
ದಾಮೋಹ್ ನಾಕಾದ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮತ್ತೊಂದು ಆಸ್ಪತ್ರೆಗೆ ದಾಖಲೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.









