ಬಡತನ ರೇಖೆಗಿಂತ ಕೆಳಗಿನ ಹಾಗೂ ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ರಾಜ್ಯದ ಎಲ್ಲಾ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ ತಲಾ 10 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ನಿರ್ಧರಿಸಿದೆ.


ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ಹಿಂದಿನ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯಡಿ ಸದ್ಯ 5 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅದನ್ನು 10 ಕೆ.ಜಿ ಗೆ ಏರಿಸಲಾಗಿದೆ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೂ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಮೂಲಕ ನಾಡಿನ ಎಲ್ಲಾ ಬಡಕುಟುಂಬಗಳ ಹಸಿವನ್ನು ನೀಗಿಸಿ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ.