ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಲು ಸರ್ಕಾರ ತೀರ್ಮಾನಿಸಿದ್ದು, ಸ್ಥಳವನ್ನು ನಿರ್ಧರಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಅಕ್ರಮ ಒತ್ತುವರಿ ಬಗ್ಗೆ ಸಮಸ್ಯೆ ಇದೆ. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ನಿವಾರಿಸಲು ಕಂದಾಯ ಇಲಾಖೆಯವರು ಶೀಘ್ರ ಪರಿಹಾರ ಕಂಡುಕೊಳ್ಳಲಿದ್ದಾರೆ.ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಂದಿದೆ. ಔಷಧಿ ಸಿಂಪಡನೆ ಹಾಗೂ ರೋಗ ಹರಡದಂತೆ ಪರಿಹಾರ ಕಂಡುಕೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದೆ. ಈ ಭಾಗದ ಪ್ರವಾಹ ಬಂದು ಹಾಳಾಗಿರುವ ರಸ್ತೆಗಳ ದುರಸ್ತಿಗೆ 5.80 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನೂ 5 ಕೋಟಿ ರೂ. ಹೆಚ್ಚಿನ ಅನುದಾನವನ್ನು ಬಿಡುಗಡೆ ನಿನ್ನೆಯಷ್ಟೇ ಬಿಡುಗಡೆ ಮಾಡಲಾಗಿದೆ.
ದತ್ತ ಪೀಠ ಈ ಭಾಗದ ಭಾವನೆಗಳ ದೇವಸ್ಥಾನ. ಈ ದೇವಸ್ಥಾನದಲ್ಲಿ ಮೂಲ ಪೂಜೆ ನಡೆಸುವ ಬಗ್ಗೆ ಶಾಸಕ ಸಿಟಿ ರವಿಯವರು ಸುದೀರ್ಘ ಹೋರಾಟ ನಡೆಸಿದ್ದಾರೆ. ಈಗಾಗಲೇ ಕಾನೂನಾತ್ಮಕ ಹೊರಾಟ ನಡೆದಿದ್ದು, ಸೂಕ್ತ ಪರಿಹಾರ ದೊರೆಯಲಿದೆ.ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಿಸಲು ಆಯವ್ಯಯದಲ್ಲಿ ಅನುದಾನವನ್ನು ಮೀಸಲಿರಿಸಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು.
ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದೆ ಅದಕ್ಕೆ ಪರಿಹಾರ ಕಂಡುಕೊಳ್ಳಲು ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುತ್ತಿದ್ದೇವೆ ಆನೆ ದಾಳಿಯಿಂದ ಜೀವ ಹಾನಿಯಾದರೆ 15 ಲಕ್ಷಪರಿಹಾರ ನೀಡಲಾಗುತ್ತಿದೆ. ಆನೆ ದಾಳಿಯನ್ನು ತಡೆಯಲು ಪ್ರತಿ ಜಿಲ್ಲೆಗೆ ಸ್ಕ್ವಾಡ್ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೆ ವೇಳೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬೇಟಿ ನೀಡಿ ಅಡಿಕೆ ಬೆಳೆಗಾರರ ಸಂಕಷ್ಟವನ್ನು ಆಳಿಸಿದ ಸಿಎಂ ಸರ್ಕಾರದಿಂದ ಸೂಕ್ತ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದಾರೆ.