ಶಾಲೆಯೊಂದರ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 100 ಮಕ್ಕಳು ಮೃತಪಟ್ಟ ಆಘಾತಕಾರಿ ಘಟನೆ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದಿದೆ.
ಶುಕ್ರವಾರ ಬೆಳಿಗ್ಗೆ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಹಜಾರಸ್ ಮತ್ತು ಶಿಯಾಸ್ ಜನಾಂಗದ ಮಕ್ಕಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪತ್ರಕರ್ತರು ಹೇಳಿದ್ದಾರೆ.

ದಶತ್-ಇ-ಬಾರ್ಚಿಯಲ್ಲಿ ಕಾಜ್ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನಡೆದಿದೆ. ಶಾಲೆಯಲ್ಲಿ ಪರೀಕ್ಷಾ ತಯಾರಿ ನಡೆದಿದ್ದರಿಂದ ತರಗತಿಗಳು ಸಂಪೂರ್ಣವಾಗಿ ಭರ್ತಿಯಾಗಿದ್ದವು. ಈಗಾಗಲೇ 100 ಮಕ್ಕಳ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಟ್ವೀಟರ್ ನಲ್ಲಿ ಪತ್ರಕರ್ತ ಆತಂಕ ವ್ಯಕ್ತಪಡಿಸಿದ್ದಾರೆ.






