• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಐತಿಹಾಸಿಕ ಮೈಲುಗಲ್ಲಿನ ಸಾಧಿಸಿದ ಭಾರತ, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ; ಕೆಂಪುಕೋಟೆಯಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜ ಪ್ರದರ್ಶನ!

ಪ್ರತಿಧ್ವನಿ by ಪ್ರತಿಧ್ವನಿ
October 21, 2021
in ದೇಶ
0
ಐತಿಹಾಸಿಕ ಮೈಲುಗಲ್ಲಿನ ಸಾಧಿಸಿದ ಭಾರತ, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ; ಕೆಂಪುಕೋಟೆಯಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜ ಪ್ರದರ್ಶನ!
Share on WhatsAppShare on FacebookShare on Telegram

ಜಗತ್ತಿನಲ್ಲಿಯೇ 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಿರುವ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾದೆ. ಜಗತ್ತಿನ ಅತಿ ದೊಡ್ಡ ಲಸಿಕೀಕರಣ ಕಾರ್ಯಕ್ರಮವಾಗಿರುವ ಭಾರತದ ಈ ಸಾಧನೆಯನ್ನು ಸಂಭ್ರಮಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ, ಈ ಸಾಧನೆ ಮಾಡಿರುವುದಕ್ಕೆ ದೇಶವನ್ನು ಅಭಿನಂದಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವದ ಫಲವಾಗಿದೆ ಎಂದಿದ್ದಾರೆ.

ಮಾಹಿತಿ ಪ್ರಕಾರ, ಬುಧವಾರ ದೇಶದ ಒಟ್ಟಾರೆ ಲಸಿಕೆ ಸಂಖ್ಯೆ 99.7 ಕೋಟಿ ದಾಟಿತ್ತು. ದೇಶದ ಶೇ 75ರಷ್ಟು ವಯಸ್ಕರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದರೆ, ಶೇ 31ರಷ್ಟು ಮಂದಿ ಎರಡೂ ಡೋಸ್ ಪಡೆದುಕೊಂಡಿದ್ದಾರೆ.

बधाई हो भारत!

दूरदर्शी प्रधानमंत्री श्री @NarendraModi जी के समर्थ नेतृत्व का यह प्रतिफल है।#VaccineCentury pic.twitter.com/11HCWNpFan

— Dr Mansukh Mandaviya (@mansukhmandviya) October 21, 2021

ದೇಶದ ಒಟ್ಟಾರೆ ಲಸಿಕೆ ನೀಡಿಕೆ ಸಂಖ್ಯೆ ಒಂದು ಬಿಲಿಯನ್ ಕ್ರಮಿಸಿದ ಬಳಿಕ ಕೆಂಪುಕೋಟೆಯಲ್ಲಿ ನಡೆಯಲಿರುವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಗಾಯಕ ಕೈಲಾಶ್ ಖೇರ್ ಹಾಡಿರುವ ಹಾಡೊಂದನ್ನು ಬಿಡುಗಡೆ ಮಾಡಿ, ಜತೆಗೆ ಧ್ವನಿ-ದೃಶ್ಯ ಚಿತ್ರವೊಂದನ್ನು ಸಹ ಬಿಡುಗಡೆಗೊಳಿಸುವುದಾಗಿ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ. ಸುಮಾರು 1,400 ಕೆಜಿ ತೂಕವಿರುವ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜವನ್ನು ಕೂಡ ಕೆಂಪುಕೋಟೆಯಲ್ಲಿ ಪ್ರದರ್ಶಿಸುವ ನಿರೀಕ್ಷೆಯಿದೆ.

ಈ ಸಾಧನೆಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ರೈಲುಗಳು, ವಿಮಾನಗಳು ಮತ್ತು ಹಡಗುಗಳಲ್ಲಿ ಪ್ರಕಟಣೆಗಳನ್ನು ಕೂಡ ಹೊರಡಿಸಲು ಸರ್ಕಾರ ಯೋಜಿಸಿದೆ. ಶೇ 100ರಷ್ಟು ಲಸಿಕೀಕರಣ ಸಾಧಿಸಿರುವ ಗ್ರಾಮಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿರುವ ಸಾಧನೆಯ ಪೋಸ್ಟರ್ ಹಾಗೂ ಬ್ಯಾನರ್ಗಳನ್ನು ಹಾಕಬೇಕು. ಅದರಲ್ಲಿ ಈ ಸಾಧನೆಗೆ ಕಾರಣರಾದ ಆರೋಗ್ಯ ಕಾರ್ಯಕರ್ತರನ್ನು ಅಭಿನಂದಿಸಬೇಕು ಎಂದು ಹೇಳಿದೆ.

ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವುದರೊಂದಿಗೆ ಜನವರಿ 16 ರಿಂದ ದೇಶಾದ್ಯಂತ ಲಸಿಕೆ ಅಭಿಯಾನ ಆರಂಭವಾಗಿತ್ತು. ಫೆಬ್ರವರಿ 2 ರಿಂದ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ, ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 45 ವರ್ಷಕ್ಕೂ ಮೇಲ್ಪಟ್ಟ ದುರ್ಬಲ ವರ್ಗದವರಿಗೆ ಲಸಿಕೆ ನೀಡಿಕೆಯನ್ನು ಆರಂಭಿಸಲಾಗಿತ್ತು. ಏಪ್ರಿಲ್ 1 ರಿಂದ 45 ವರ್ಷದೊಳಗಿನ ಎಲ್ಲಾ ಜನರಿಗೂ ದೇಶಾದ್ಯಂತ ಲಸಿಕೆ ನೀಡಿಕೆ ಪ್ರಾರಂಭವಾಗಿತ್ತು. ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೂ ಲಸಿಕೆ ನೀಡುವಿಕೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ದೇಶದಲ್ಲಿ 2-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಅನುಮೋದನೆ ನೀಡಲಾಗಿದೆ. ಇದು ಶೀಘ್ರದಲ್ಲಿಯೇ ಜಾರಿಗೆ ಬರುವ ಸಾಧ್ಯತೆ ಇದೆ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಝೈಡಸ್ ಕ್ಯಾಡಿಲಾ ಲಸಿಕೆ ನೀಡಲು ಕೂಡ ಅನುಮೋದನೆ ಕೊಡಲಾಗಿದೆ. ಇವು ಜಾರಿಯಾದರೆ ಮತ್ತಷ್ಟು ಲಸಿಕೆ ಸಾಧನೆ ಸಾಧ್ಯವಾಗಲಿದೆ.

ಕೋವಿಡ್ 19 ವಿರುದ್ಧದ ಲಸಿಕೆ ಅಭಿಯಾನ ಆರಂಭಿಸಿ ಒಂಬತ್ತು ತಿಂಗಳ ಬಳಿಕ ಭಾರತ ಹೊಸ ಮೈಲುಗಲ್ಲು ಸಾಧಿಸಿದೆ.

Tags: 100 ಕೋಟಿBJPCovid 19ಐತಿಹಾಸಿಕ ಮೈಲುಗಲುನರೇಂದ್ರ ಮೋದಿಬಿಜೆಪಿಭಾರತಲಸಿಕೆ ಕಾರ್ಯಕ್ರಮ
Previous Post

74 ವರ್ಷಗಳ ಶ್ರಮದಿಂದ ಸ್ಥಾಪಿಸಿದ ಸರ್ಕಾರಿ ಸಂಸ್ಥೆಗಳನ್ನು ಒಂದೊಂದಾಗಿ ಮಾರುತ್ತಿರುವ ಮೋದಿ ಸರ್ಕಾರ!

Next Post

ಪ್ರಿಯಾಂಕ ಗಾಂಧಿಯೊಂದಿಗೆ ಸೆಲ್ಫಿ – ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಯೋಗಿ ಸರ್ಕಾರ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಪ್ರಿಯಾಂಕ ಗಾಂಧಿಯೊಂದಿಗೆ ಸೆಲ್ಫಿ – ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಯೋಗಿ ಸರ್ಕಾರ

ಪ್ರಿಯಾಂಕ ಗಾಂಧಿಯೊಂದಿಗೆ ಸೆಲ್ಫಿ – ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಯೋಗಿ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada