ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 107 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಮತ್ತೆ ಸೋಂಕು ಪ್ರಮಾಣ ಏರಿಕೆಯ ಸೂಚನೆ ನೀಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ನೀಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಒಂದೇ ದಿನ 100 ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1718ಕ್ಕೆ ಏರಿಕೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.1.09ಕ್ಕೆ ಏರಿಕೆಯಾಗಿದೆ.





