• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

10ನೇ ದಿನಕ್ಕೆ ಕಾಲಿಟ್ಟ ರಾಜ್ಯ ರೈತರ ಧರಣಿಗೆ ಬೆಂಬಲ ನೀಡಿದ ಕಾರ್ಮಿಕ ಸಂಘಟನೆಗಳು

by
December 25, 2020
in ಕರ್ನಾಟಕ
0
10ನೇ ದಿನಕ್ಕೆ ಕಾಲಿಟ್ಟ ರಾಜ್ಯ ರೈತರ ಧರಣಿಗೆ ಬೆಂಬಲ ನೀಡಿದ ಕಾರ್ಮಿಕ ಸಂಘಟನೆಗಳು
Share on WhatsAppShare on FacebookShare on Telegram

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಧರಣಿ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ರೈತರು ನಡೆಸುತ್ತಿರುವ ಈ ಹೋರಾಟವನ್ನು ಬೆಂಬಲಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಕಾರ್ಮಿಕರು ಧರಣಿ ನಡೆಸಿದ್ದಾರೆ.

ADVERTISEMENT

CITU, INTUC, AIUTUC, HMS, HMKP, NCL, AICCTU, UTUC ಸೇರಿದಂತೆ ಹಲವು ಕೇಂದ್ರ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ರೈತರ ಧರಣಿಯಲ್ಲಿ ಭಾಗವಹಿಸಿದ್ದಾರೆ.

ಈ ಧರಣಿಯನ್ನು ಉದ್ದೇಶಿಸಿ ಮಾತಾನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ ಎನ್ ಉಮೇಶ್, ಕೇಂದ್ರದ ಮೋದಿ ಸರ್ಕಾರ, ದೇಶದ ರಾಜಧಾನಿಗೆ ರೈತರು ಬರದಂತೆ ತಡೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸಿದರೂ ಆ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿ ಕಳೆದ ಮೂವತ್ತು ದಿನದಿಂದ ಲಕ್ಷಾಂತರ ರೈತರು ಪ್ರತಿಭಟಿಸುತ್ತಿದ್ದಾರೆ.ಈ ಪ್ರತಿರೋಧ ಈಗಾಗಲೇ ಇತಿಹಾಸ ನಿರ್ಮಿಸಿದ್ದು ಇದಕ್ಕೆ ದೇಶವ್ಯಾಪಿ ಎಲ್ಲಾ ಜನರ ಬೆಂಬಲ ಸಿಗುತ್ತಿದ್ದು ಈ ಹೋರಾಟ ಜಯಗಳಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತ್ರಿವಳಿ ತಲಾಖ್ ನಿಷೇಧಿಸಿ ದೊಡ್ಡ ಪ್ರಚಾರ ಮಾಡಿಕೊಂಡ ಪ್ರಧಾನಿ ಮೋದಿ ಈಗ ಈ ತ್ರಿವಳಿ ಕೃಷಿ ಕಾನೂನುಗಳ ಮೂಲಕ ಇಡೀ ಕೃಷಿ ಯಿಂದ ರೈತರಿಗೆ ತಲಾಖ್ ಕೊಡಿಸುತ್ತಿದೆ. ಇದು ಕಾರ್ಪೊರೇಟ್ ಪರ ಇರುವ ಕಾನೂನು, ಇದರಿಂದ ದುಡಿಯುವ ಜನರನ್ನು ದಿವಾಳಿಯಾಗುತ್ತಾರೆ. ಸಂಸತ್ತಿನಲ್ಲಿ ಇರುವ ಬಹುಮತವನ್ನು ದುರುಪಯೋಗ ಮಾಡಿಕೊಂಡು ಜನ ದ್ರೋಹಿ ಕಾನೂನು ಅಂಗೀಕರಿಸಿದ್ದರೂ ಬೀದಿಯಲ್ಲಿ ನಡೆಯುವ ಜನ ಹೋರಾಟದಲ್ಲಿ ತಿರಸ್ಕರಿಸಲಾಗಿದೆ ಎಂದಿದ್ದಾರೆ.

ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ರೈತ ದಲಿತ ಕಾರ್ಮಿಕ ದುಡಿಯುವ ವರ್ಗವನ್ನು ದಮನ ಮಾಡಲು ಕೇಂದ್ರ ಸರ್ಕಾರ ಕಾನೂನು ರೂಪಿಸುತ್ತಿದೆ, ಲಕ್ಷಾಂತರ ರೈತರು ದೆಹಲಿಯಲ್ಲಿ ಶಾಂತಿಯುತವಾಗಿ 30 ದಿನಗಳಿಂದ ಚಳುವಳಿ ನಡೆಸುತ್ತಿರುವುದನ್ನು ಕೇಂದ್ರ ಸರ್ಕಾರ ಸಹಿಸಿಕೊಳ್ಳಲು ಸಾಧ್ಯವಾಗದೆ ವಿಲವಿಲ ಒದ್ದಾಡುತ್ತಿದೆ. ರೈತರ ಹೋರಾಟ ಗೆಲ್ಲಬೇಕು , ರೈತರಿಗೆ ನ್ಯಾಯ ಸಿಗಬೇಕು ಎಂಬ ಛಲದಿಂದ ಹೋರಾಟ ನಡೆಸುತ್ತಿದ್ದಾರೆ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರನ್ನು ರಕ್ಷಿಸಲು, ದೇಶದ ಕಾರ್ಮಿಕರು ದಲಿತರು ರೈತರು ಒಗ್ಗೂಡಿ ಹೋರಾಟ ನಡೆಸುತ್ತಿರುವುದು ಐತಿಹಾಸಿಕ ವಾಗಿದೆ, ಈ ಚಳುವಳಿ ದಮನ ಮಾಡಲು ಕೇಂದ್ರ ಸರ್ಕಾರ ವಿಭಿನ್ನ ರೀತಿಯ ಪ್ರಯತ್ನಗಳನ್ನು ನಡೆಸುತ್ತ ವಿಫಲವಾಗಿದೆ ಎಂದಿದ್ದಾರೆ

ಪ್ರತಿಭಟನಾ ಧರಣಿಯ ನೇತೃತ್ವವನ್ನು JCTU ರಾಜ್ಯ ಸಂಚಾಲಕ ಕೆ.ವಿ.ಭಟ್ , INTUC ರಾಜ್ಯ ಅಧ್ಯಕ್ಷ ಪ್ರಕಾಶ್, HMS ನ ನಾಯಕ ನಾಗನಾಥನ್ , AICCTU ಅಪ್ಪಣ್ಣ ಹಾಗೂ ಮಣಿ, ಕಟ್ಟಡ ಕಾರ್ಮಿಕರ ಸಂಘಟನೆ ರಾಜ್ಯ ಅಧ್ಯಕ್ಷ ಕೆ.ಮಹಾಂತೇಶ್, ಸಿಐಟಿಯು ರಾಜ್ಯ ಉಪಾಧ್ಯಕ್ಷೆ ಲೀಲಾವತಿ , AIUTUC ಯ ಷಣ್ಮುಖ, NCL ನ ಲೀಲಾವತಿ, RKS ನ ದಿವಾಕರ್, ರಾಜ್ಯ ಕಬ್ಬು ಬೆಳೆಗಾರರ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಪ್ರಾಂತ ರೈತ ಸಂಘದ ಟಿ ಯಶವಂತ, ಕರ್ನಾಟಕ ಜನ ಶಕ್ತಿಯ ಸಿರಿಮನೆ ನಾಗರಾಜ್ ಮೊದಲಾದವರು ಪಾಲ್ಗೊಂಡಿದ್ದರು .

Tags: Farmers protestlabor unionsಕಾರ್ಮಿಕ ಸಂಘಟನೆರೈತರ ಧರಣಿ
Previous Post

ದೇಶದ ಕಿರಿಯ ಮೇಯರ್‌ ಆಗಿ 21 ವರ್ಷದ ಆರ್ಯ ರಾಜೇಂದ್ರನ್‌ ಆಯ್ಕೆ

Next Post

ಕೃಷಿ ಕಾಯ್ದೆ ಕುರಿತು ರಾಹುಲ್‌ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಕೇಂದ್ರ ಸಚಿವ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಕೃಷಿ ಕಾಯ್ದೆ ಕುರಿತು ರಾಹುಲ್‌ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಕೇಂದ್ರ ಸಚಿವ

ಕೃಷಿ ಕಾಯ್ದೆ ಕುರಿತು ರಾಹುಲ್‌ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಕೇಂದ್ರ ಸಚಿವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada