ವಿದ್ಯಾಭ್ಯಾಸಕ್ಕೆಂದು ಉಕ್ರೇನ್ಗೆ (Ukraine) ತೆರಳಿದ್ದ ಕರ್ನಾಟಕ ವಿದ್ಯಾರ್ಥಿಗಳ ಪೈಕಿ 12 ಜನರು ಇಂದು ಭಾನುವಾರ ಬೆಳಿಗ್ಗೆ 8:45 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಕ್ಕೆ ಬಂದಿಳಿದಿದ್ದಾರೆ. ಕರ್ನಾಟಕ ಸಚಿವ ಆರ್ ಅಶೋಕ್ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಅವರೊಂದಿಗೆ ಸಂವಾದ ನಡೆಸಿದರು.
ಹೌದು, ರಷ್ಯಾ ಮತ್ತು ಉಕ್ರೇನ್ ನಡುವೆ ಮಹಾಯುದ್ಧ ನಡೆಯುತ್ತಿರುವ ಹಿನ್ನೆಲೆ ಕನ್ನಡಿಗರು ಉಕ್ರೇನ್ನಲ್ಲಿ ಸಿಲುಕಿದ್ದರು. ಸದ್ಯ ಇಂದು 12 ಜನರು ಮಾತ್ರ ಬೆಂಗಳೂರಿಗೆ ಬಂದು ಇಳಿದಿದ್ದಾರೆ. ಇನ್ನೂ ಹಲವು ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ.
ಉಕ್ರೇನ್‌ನಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಮುಂಬೈ ಮತ್ತು ದೆಹಲಿಯಲ್ಲಿ ಬಂದಿಳಿದ ನಂತರ ರಾಜ್ಯದ ವಿವಿಧ ಭಾಗಗಳಲ್ಲಿರುವ ತಮ್ಮ ಮನೆಗಳನ್ನು ತಲುಪಲು ತಮ್ಮ ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡುವಂತೆ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ಪ್ರಧಾನ ನಿವಾಸಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು. “ನಾನು ಈ ವಿಷಯದ ಬಗ್ಗೆ ಮಾತನಾಡಿದ ನಂತರ ನಾವು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೂ ನಮ್ಮ ವಿದ್ಯಾರ್ಥಿಗಳ ಪಟ್ಟಿಯನ್ನು ಕಳುಹಿಸಿದ್ದೇವೆ. ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ಸಿಲುಕಿರುವವರನ್ನು ರಸ್ತೆ ಮೂಲಕ ಕರೆತರಲು ನಿರ್ಧರಿಸಲಾಗಿದೆ. ಅದರಂತೆ, ಅನೇಕ ವಿದ್ಯಾರ್ಥಿಗಳು ರೊಮೇನಿಯಾ ಮೂಲಕ ಆಗಮಿಸುತ್ತಿದ್ದಾರೆ. ಅವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.