ಜಮ್ಮು ಕಾಶ್ಮೀರದ ವೈಷ್ಣೋದೇವಿ ಸನ್ನಿಧಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 12 ಜನ ಯಾತ್ರಾರ್ಥಿಗಳು ಸಾವನಪ್ಪಿದ್ದು, 14 ಮಂದಿ ತೀವ್ರ ಗಾಯಗೊಂಡಿದ್ದಾರೆ.
ಹೊಸ ವರ್ಷದಂದು ಭಾರೀ ಪ್ರಮಾಣದಲ್ಲಿ ಭಕ್ತಾದಿಗಳು ಸೇರಿ ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಕೆಲವು ಯುವಕರ ನಡುವ ವಗ್ವಾದ ನಡೆದು ನಂತರ ಕಾಲ್ತುಳಿತ ಉಂಟಾಗಿರುವ ಸಂಭವವಿದೆ ಎಂದು ಅಧಿಕಾರಿಗಳು ಅನುಮಾನಿಸಿದ್ದಾರೆ.
ಜಮ್ಮು-ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಘಟನೆಯಲ್ಲಿ 12ಜನ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಗಾಯಾಳುಗಳಿಗರ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ
ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಭಾಗ್ ಸಿಂಗ್ ಪ್ರತಿಕ್ರಿಯಿಸಿ, ʻʻಕೆಲ ಯುವಕರ ನಡವೆ ಸಣ್ಣ ವಾಗ್ವಾದ ಉಂಟಾದ ಕಾರಣ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆʼʼ ಎಂದಿದ್ದಾರೆ.
ಪೊಲೀಸರು ಮತ್ತು ದೇವಸ್ಥಾನದ ಅಧಿಕಾರಿಗಳು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಘಟನೆ ಸಂಭವಿಸಿತ್ತು ಎಂದು ಸಿಂಗ್ ಹೇಳಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉನ್ನತ ಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಮತ್ತು ಕೆಲವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ತೀವ್ರ ಸಂತಾಪವನ್ನ ಸೂಚಿಸಿದ್ದಾರೆ. ʻʻಮಾತಾ ವೈಷ್ಣೋದೇವಿ ಸನ್ನಿಧಾನದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ. ದುಃತುಪ್ತ ಕುಟುಂಬಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುವೆ,” ಎಂದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ಹಾಗೂ ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.