• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಶೋಧ

13 ಮಂದಿ ಮಾಯಮ್ಮನ ಭಕ್ತರ ಪ್ರಾಣ ತೆಗೆದ ಅಪಘಾತ.. ಗ್ರಾಮಸ್ಥರ ಆಕ್ರಂದನ

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in ಶೋಧ
0
13 ಮಂದಿ ಮಾಯಮ್ಮನ ಭಕ್ತರ ಪ್ರಾಣ ತೆಗೆದ ಅಪಘಾತ.. ಗ್ರಾಮಸ್ಥರ ಆಕ್ರಂದನ
Share on WhatsAppShare on FacebookShare on Telegram

ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಮುಗಿಸಿಕೊಂಡು ವಾಪಸ್‌ ಆಗ್ತಿದ್ದಾಗ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿಯಲ್ಲಿದ್ದ ಮಕ್ಕಳು ಸೇರಿ 17 ಜನರ ಪೈಕಿ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಭದ್ರಾಬಾಯಿ, ಮಂಜುಳಾ, ಆದರ್ಶ, ಆರ್ಯ, ವಿಶಾಲಾಕ್ಷಿ, ರೂಪಾಬಾಯಿ, ನಂದನ್, ಅಂಜಲಿ, ನಾಗೇಶ್ವರ ರಾವ್, ಅರುಣ್ ಕುಮಾರ್, ಮಂಜುಳಾ ಬಾಯಿ, ಭಾಗ್ಯಲಕ್ಷ್ಮಿ ಮೃತರು. ಡಿಕ್ಕಿ ರಭಸಕ್ಕೆ ಟಿಟಿಯಲ್ಲಿದ್ದ ಜನರು ಶವವಾಗಿ ಹೊರಗೆ ಬಿದ್ದಿದ್ದಾರೆ.

ADVERTISEMENT

ಮೃತರು ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ ಸುತ್ತಮುತ್ತಲ ಗ್ರಾಮದವರಾಗಿದ್ದಾರೆ. ಸಾವನ್ನಪ್ಪಿದವರಲ್ಲಿ ಎರಡು ಕುಟುಂಬದ ತಲಾ ನಾಲ್ವರು ಸೇರಿದ್ದಾರೆ. ಭೀಕರ ಅಪಘಾತದಲ್ಲಿ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರ್ಪಿತಾ, ಪರಶುರಾಮ್‌, ಪುಣ್ಯಾ ಭಾಯಿ ಹಾಗೂ 12 ವರ್ಷದ ಗೌತಮ್‌ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರ ಪಾರ್ಥಿವ ಶರೀರಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಗಟ್ಟಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗಿದೆ. ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಡೀ ಗ್ರಾಮಕ್ಕೆ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದ್ದು, ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದ ರಾಘವೇಂದ್ರ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸಾರ್ವಜನಿಕ ದರ್ಶನದ ಬಳಿಕ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Tags: accidentAccidentsbreakingnewsinkannadaHaveri DistrictSavadatti Yallamma
Previous Post

ತ್ವಚೆ ಸುಕ್ಕಾಗುವುದನ್ನು ತಡೆಯಲು ಈ ಸಿಂಪಲ್ ಮನೆಮದ್ದನ್ನು ಬಳಸಿ.!

Next Post

ಭಾರತ ಫುಟ್‌ವಾಲ್‌ ತಂಡದ ನಾಯಕಿ ದುರ್ಮರಣ.. ಸಿಎಂ ಪರಿಹಾರ.. ರಾಷ್ಟ್ರಪತಿ ಸಂತಾಪ

Related Posts

ಜೀವಪ್ರೀತಿ ಇಲ್ಲದ ನೆಲದಲ್ಲಿ ಸತ್ಯಾಗ್ರಹ ಮತ್ತು ನ್ಯಾಯ
ಅಂಕಣ

ಜೀವಪ್ರೀತಿ ಇಲ್ಲದ ನೆಲದಲ್ಲಿ ಸತ್ಯಾಗ್ರಹ ಮತ್ತು ನ್ಯಾಯ

by ನಾ ದಿವಾಕರ
July 17, 2026
0

ನಾ ದಿವಾಕರ ಭಾರತದ ನೆಲದಲ್ಲಿ ಪ್ರಜಾಪ್ರಭುತ್ವದ ಲಕ್ಷಣಗಳು ಬೇರೂರಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್‌ ಪದೇ ಪದೇ ಹೇಳುತ್ತಿದ್ದುದುಂಟು. ರಾಜಕೀಯವಾಗಿ ಇದು ಎಂಟು ದಶಕಗಳು ಕಳೆದರೂ ಬದಲಾಗಿಲ್ಲ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

March 16, 2026
Next Post
ದೆಹಲಿಯ ಕರ್ನಾಟಕ‌ಭವನದಲ್ಲಿ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು…

ಭಾರತ ಫುಟ್‌ವಾಲ್‌ ತಂಡದ ನಾಯಕಿ ದುರ್ಮರಣ.. ಸಿಎಂ ಪರಿಹಾರ.. ರಾಷ್ಟ್ರಪತಿ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada