• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ:ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ
0
ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ:ಸಚಿವ ಕೆ.ಜೆ.ಜಾರ್ಜ್
Share on WhatsAppShare on FacebookShare on Telegram

ಶಿರಾ: ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯ ಮೊದಲ ಹಂತದಲ್ಲಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು ಎಂದು ಇಂಧ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ADVERTISEMENT
Modi VS Manmohan Singh:ನೋಟ್‌ ಬ್ಯಾನ್‌ ಮಧ್ಯಮ ವರ್ಗದ ಜನರಿಗೆ ತೀವ್ರ ಹೊಡೆತ..! #modi #noteban #congress

ಕುಸುಮ್-ಸಿ ಯೋಜನೆಯಡಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಾಂಗವರ ಬಳಿ ಮತ್ತು ಚಿಕ್ಕಬಾಣಗೆರೆ ಬಳಿ ನಿರ್ಮಿಸಿರುವ ಸೋಲಾರ್ ಪಾರ್ಕ್ ಗಳು ಹಾಗೂ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನೀರಗುಂದ ಗೇಟ್ ಬಳಿ ಸ್ಥಾಪಿಸಿರುವ ಸೋಲಾರ್ ಪಾರ್ಕ್ ಗೆ ಸೋಮವಾರ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

“ಕುಸುಮ್-ಸಿ ಯೋಜನೆಯ ಮೊದಲ ಹಂತದಲ್ಲಿ ರಾಜ್ಯಾದ್ಯಂತ ವಿವಿಧ ಫೀಡರ್ ವ್ಯಾಪ್ತಿಗಳಲ್ಲಿ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು. ಕಾಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ”, ಎಂದು ಹೇಳಿದರು.

“ಕುಸುಮ್-ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುತ್ತಿದೆ. ಕುಸುಮ್-ಸಿ ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪಸೆಟ್‌ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಸಲಾಗುವುದು”, ಎಂದು ಮಾಹಿತಿ ನೀಡಿದರು.

“ಫೀಡರ್ ಮಟ್ಟದ ಸೌರೀಕರಣಕ್ಕೆ ಸೋಲಾರ್ ಪಾರ್ಕ್ ಗಳನ್ನು ಸ್ಥಾಪಿಸಲು ಸರ್ಕಾರಿ ಭೂಮಿ ಇದ್ದರೆ ಅದನ್ನು ಉಚಿತವಾಗಿ ಇಂಧನ ಇಲಾಖೆಗೆ ಪಡೆದು ಗುತ್ತಿಗೆದಾರರಿಗೆ ನೀಡಲಾಗುತ್ತದೆ. ಗುತ್ತಿಗೆದಾರರು ಪ್ರತಿ ಎಕರೆ ಭೂಮಿಗೆ ವಾರ್ಷಿಕ 25 ಸಾವಿರ ರೂ. ಪಾವತಿಸಬೇಕು. ಈ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಚರ್ಚಿಸಿ, ಈ ಹಣವನ್ನು ಸೋಲಾರ್ ಪಾರ್ಕ್ ಇರುವ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆಗೆ ವೆಚ್ಚ ಮಾಡಲಿದ್ದಾರೆ. ಸರ್ಕಾರಿ ಭೂಮಿ ಲಭ್ಯವಿಲ್ಲದೇ ಇದ್ದರೆ ಖಾಸಗಿ ಭೂಮಿ ಪಡೆಯಲಾಗುವುದು.ಈ ಭೂಮಿಗೆ ಪ್ರತಿ ಎಕರೆಗೆ 25,000 ರೂ.ಅನ್ನು ಗುತ್ತಿಗೆದಾರರು ಭೂಮಾಲೀಕರಿಗೆ ಪಾವತಿ ಮಾಡಲಿದ್ದಾರೆ”, ಎಂದು ಹೇಳಿದರು.

“ಹಗಲು ವೇಳೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಲಭ್ಯವಾಗುವುದರಿಂದ ರೈತರು ಕುಸುಮ್-ಸಿ ಯೋಜನೆಗೆ ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಒಂದು ಫೀಡರ್ ಸೌರೀಕರಣವಾದರೆ ಸುತ್ತಲಿನ ಸುಮಾರು 1,000ಕ್ಕಿಂತ ಹೆಚ್ಚು ರೈತರಿಗೆ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. ರೈತರಿಗೆ ಈ ಫೀಡರ್ ಗಳಿಂದ ವಿದ್ಯುತ್ ಪೂರೈಸುವ ಕಾರಣ, ಇತರೆ ಗ್ರಾಹಕರಿಗೆ ಎಸ್ಕಾಂಗಳಿಂದ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತದೆ”, ಎಂದು ತಿಳಿಸಿದರು.

“ಖಾಸಗಿಯವರೇ ಇಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಾರೆ. ಅದನ್ನು ಸರ್ಕಾರ ಖರೀದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸುತ್ತದೆ. ಪ್ರತಿ ಯೂನಿಟ್ ವಿದ್ಯುತ್ ಗೆ ಗುತ್ತಿಗೆದಾರಿಗೆ ಗರಿಷ್ಠ 3.17 ರೂ. ನಿಗದಿಪಡಿಸಲಾಗುತ್ತದೆ. ಚಾಂಗವರ ಬಳಿ ಸ್ಥಾಪಿಸಿರುವ ಸೋಲಾರ್ ಪಾರ್ಕ್ ನಲ್ಲಿ ಪ್ರತಿ ಯೂನಿಟ್ ವಿದ್ಯುತ್ತಿಗೆ 3.15 ರೂ. ದರ ನಿಗದಿಪಡಿಸಲಾಗಿದೆ”, ಎಂದು ಸಚಿವರು ಮಾಹಿತಿ ನೀಡಿದರು.

ಶೀಘ್ರದಲ್ಲೇ ಉದ್ಘಾಟನೆ:”ಈಗಾಗಲೇ ಪೂರ್ಣಗೊಂಡಿರುವ ಕುಸುಮ್-ಸಿ ಫೀಡರ್ ಮಟ್ಟದ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ನೀಡಿದ್ದು, ಎಲ್ಲಾ ರೀತಿಯ ಸಹಕಾರ ಕೊಡುತ್ತಿದ್ದಾರೆ. ಇದರ ಪರಿಣಾಮ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ. ಶೀಘ್ರದಲ್ಲೇ ಮುಖ್ಯಮಂತ್ರಿಯವರಿಂದ ಈ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗುವುದು”, ಎಂದು ಸಚಿವರು ಹೇಳಿದರು.

ಈ ವೇಳೆ ದೆಹಲಿಯಲ್ಲಿನ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯೂ ಆಗಿರುವ ಶಿರಾ ಕ್ಷೇತ್ರದ ಶಾಸಕಟಿ.ಬಿ.ಜಯಚಂದ್ರ, ಹೊಸದುರ್ಗದ ಕ್ಷೇತ್ರದ ಶಾಸಕ ಬಿ.ಜಿ.ಗೋವಿಂದಪ್ಪ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮತ್ತಿತರರು ಇದ್ದರು.

Tags: 13000 MW power generation.B. G. GovindappaContinuous 7 hours of quality power.Deputy Chief Secretary to Government of Energy Departmentfarmers' pump sets.gaurav guptaKusum-CKusum-C projectMahantesh BilagiManaging Director of Bescom.Managing Director of KPTCLMinister K.J.GeorgeMLA from Hosdurga ConstituencyMLA from Shira ConstituencyPankaj Kumar PandeyPower Generation.Shira.T B Jayachandrawho is also the Special Representative of the State Government in Delhi
Previous Post

ಯಶ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಕೊಡ್ತಾರಾ ಟಾಕ್ಸಿಕ್ ಗಿಫ್ಟ್..!! ಯಶ್ ಬರೆದ ಪತ್ರದಲ್ಲಿ ಏನೇದೆ..?

Next Post

ರಂಗ ವೈವಿಧ್ಯತೆಗೆ ಸಾಕ್ಷಿಯಾದ ಒಂದು ಪ್ರಯೋಗ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ರಂಗ ವೈವಿಧ್ಯತೆಗೆ ಸಾಕ್ಷಿಯಾದ ಒಂದು ಪ್ರಯೋಗ

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada