ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1334 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 16 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೊಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,46,40,748ಕ್ಕೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ 5,28,977ಕ್ಕೆ ಏರಿಕೆ ಆಗಿದೆ.
ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 4,40,91,906ಏರಿಕೆಯಾಗಿದ್ದು, ಈವರೆಗೆ 219.56ಕೋಟಿ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.