• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಾದ್ಯಂತ 14 ದಿನ ಕೋವಿಡ್ ಕರ್ಫ್ಯೂ: ಲಿಕ್ಕರ್‌ಗೆ ಇಲ್ಲ ಬ್ರೇಕ್

Any Mind by Any Mind
April 26, 2021
in ಕರ್ನಾಟಕ
0
ರಾಜ್ಯಾದ್ಯಂತ 14 ದಿನ ಕೋವಿಡ್ ಕರ್ಫ್ಯೂ: ಲಿಕ್ಕರ್‌ಗೆ ಇಲ್ಲ ಬ್ರೇಕ್
Share on WhatsAppShare on FacebookShare on Telegram

ಕೋವಿಡ್‌ ಎರಡನೇ ಅಲೆಯನ್ನು ನಿಯಂತ್ರಿಸಲು ಸೋಮವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಮುಂದಿನ 14 ದಿನಗಳ ಕಾಲ ರಾಜ್ಯದಲ್ಲಿ ಕೋವಿಡ್‌ ಕರ್ಫ್ಯೂ ಇರಲಿದೆ.

ADVERTISEMENT

ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸರ್ಕಾರಿ ಆಸ್ಪತ್ರೆಗಳಲ್ಲಿ 18 -45 ವಯಸ್ಸಿನ ಎಲ್ಲರಿಗೂ ಉಚಿತ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. 45 ರಿಂದ ಮೇಲ್ಪಟ್ಟವರಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುತ್ತಿತ್ತು. 18 ರಿಂದ 45 ವಯಸ್ಸಿನೊಳಗಿನವರಿಗೆ ರಾಜ್ಯ ಸರ್ಕಾರ ಉಚಿತ ಲಸಿಕೆ ನೀಡಲಿದೆಯೆಂದು ತಿಳಿಸಿದ್ದಾರೆ.

ಮುಂದಿನ ಎರಡು ವಾರಗಳ ಕಾಲ ಬೆಳಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಅದಾಗ್ಯೂ, ಗಾರ್ಮೆಂಟ್‌ ಫ್ಯಾಕ್ಟರಿ ಹೊರತು ಪಡಿಸಿ, ಉಳಿದೆಲ್ಲಾ ಕಾರ್ಖಾನೆಗಳೂ ಕಾರ್ಯಾಚರಿಸಬಹುದು ಎಂದು ಸರ್ಕಾರ ಹೇಳಿದೆ.

ಕೃಷಿ ಹಾಗೂ ಕನ್ಸ್ಟ್ರಕ್ಷನ್‌ ವಲಯದಲ್ಲಿ ಯಾವುದೇ ನಿರ್ಬಂಧವಿಲ್ಲ, ಅಗತ್ಯ ಮೆಡಿಕಲ್‌ ಸಾಮಾಗ್ರಿಗಳು ದೊರೆಯಲಿವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ತಾಲೂಕ್‌ ಆಫೀಸರ್‌ ನೋಡಲ್‌ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು. ಇನ್ನುಮಂದೆ ಆಮ್ಲಜನಕ ಕೊರತೆ ಇರುವುದಿಲ್ಲ.ʼ300 ರಿಂದ 800 ಮೆಟ್ರಿಕ್‌ ಟನ್‌ ಆಮ್ಲಜನಕ ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.  ರೆಮಿಡಿಸನ್‌ ಔಷಧ 50 ಸಾವಿರದಿಂದ 1.20 ಲಕ್ಷದವರೆಗೆ ಏರಿಕೆ, ಹಾಗಾಗಿ ಔಷಧ ಕೊರತೆಯು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಂತಾರಾಜ್ಯ ಗೂಡ್ಸ್ ಟ್ರಾನ್ಸ್‌ಪೋರ್ಟ್‌ಗೆ ಯಾವುದೇ ತೊಂದರೆ ಇರಲ್ಲ. ಆದರೆ, ಸಾರಿಗೆ ಬಸ್‌ಗಳಿರಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಎರಡು ವಾರದಲ್ಲಿ ಕರೋನಾ ನಿಯಂತ್ರಣಕ್ಕೆ ಬಂದಿಲ್ಲದಿದ್ದರೆ ಬಿಗಿ ಕ್ರಮಗಳು ಮುಂದುವರೆಯಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಲಾಕ್‌ಡೌನ್‌ ಅಲ್ಲ ಕೋವಿಡ್‌ ಕರ್ಫ್ಯೂ?

ಸರ್ಕಾರದ ಈ ಕ್ರಮಗಳು ಕಳೆದ ವರ್ಷ ಹೇರಿದ ಲಾಕ್‌ಡೌನ್‌ ನಂತೆ ಇದ್ದರೂ ಸರ್ಕಾರ ಇದನ್ನು ಲಾಕ್‌ಡೌನ್‌ ಎಂದು ಕರೆಯುತ್ತಿಲ್ಲ. ಲಾಕ್‌ಡೌನ್‌ ಎಂದು ಘೋಷಿಸಲು ಸರ್ಕಾರ ಹಿಂಜರಿಯುತ್ತಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಗರಂ ಆಗಿದ್ದಾರೆ. ಹೆಸರು ಮುಖ್ಯ ಅಲ್ಲ ಕ್ರಮ ಮುಖ್ಯ ಎಂದು ಅವರು ಹೇಳಿದ್ದಾರೆ. ಈ ವೇಳೆ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ, ಇದು ಲಾಕ್‌ಡೌನ್‌ ಅಲ್ಲ ʼಕೋವಿಡ್‌ ಕರ್ಫ್ಯೂʼ ಎಂದು ಸಮಜಾಯಿಷಿ ನೀಡಿದ್ದಾರೆ.

Previous Post

Covid19: ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದ ಅಂತರಾಷ್ಟ್ರೀಯ ಮಾಧ್ಯಮಗಳು

Next Post

ಸಿದ್ದರಾಮಯ್ಯರಿಂದ ಬೆಳಗಾವಿಯ 2ನೇ ದೊಡ್ಡ ಖಾಸಗಿ ಕೋವಿಡ್ ಆಸ್ಪತ್ರೆ ಉದ್ಘಾಟನೆ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಸಿದ್ದರಾಮಯ್ಯರಿಂದ ಬೆಳಗಾವಿಯ 2ನೇ ದೊಡ್ಡ ಖಾಸಗಿ ಕೋವಿಡ್ ಆಸ್ಪತ್ರೆ ಉದ್ಘಾಟನೆ

ಸಿದ್ದರಾಮಯ್ಯರಿಂದ ಬೆಳಗಾವಿಯ 2ನೇ ದೊಡ್ಡ ಖಾಸಗಿ ಕೋವಿಡ್ ಆಸ್ಪತ್ರೆ ಉದ್ಘಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada