ಬಾರ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ದಕ್ಷಿಣ ಆಫ್ರಿಕಾದ ಸೊವೆಟೊ ಟೌನ್ ಶಿಪ್ ನಡೆದಿದೆ.
ಭಾನುವಾರ ಮುಂಜಾನೆ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲೇ 12 ಮಂದಿ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಜೊಹಾನ್ಸ್ ಬರ್ಗ್ ಗೆ ಸಮೀಪದ ಸುವೆಟೊ ನಗರದಲ್ಲಿ ನಡೆದ ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.





