• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

ಪ್ರತಿಧ್ವನಿ by ಪ್ರತಿಧ್ವನಿ
June 26, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ವಯಸ್ಸಾದವರಲ್ಲಿ ಬರುತ್ತಿದ್ದ ಹೃದಯಾಘಾತ ಈಗ ಯುವಕರನ್ನು ಸಹ ಬಲಿಪಶುಗಳನ್ನಾಗಿ ಮಾಡುತ್ತಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಯುವಕರ ಸಾವಿನ ಸರಣಿ ಮುಂದುವರೆದಿದೆ.

ADVERTISEMENT

ಹಾಸನದ ಯುವಕ-ಯುವತಿಯರು ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್​ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್​ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.ಯೋಗೇಶ್​ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದರು ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ.

ಮಧ್ಯಾಹ್ನ ಹಾಸನ ಮೂಲದ ಆಟೋ ಚಾಲಕ ಯೋಗೇಶ್ ಮೃತಪಟ್ಟಿದ್ದರೆ, ಸಂಜೆ ಹಾಸನ ಮೂಲದ ಕಟ್ಟಳ್ಳಿಯ ಸುಪ್ರಿಯಾ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದ ಸುಪ್ರಿಯಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿದ್ದರು. ನಿನ್ನೆ ಸುಪ್ರಿಯಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದ್ದಿದ್ದು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸುಪ್ರಿಯಾ ಮೃತಪಟ್ಟಿದ್ದಾಳೆ.

ಒಂದು ತಿಂಗಳಲ್ಲಿ 14 ಜನರು ಹೃದಯಾಘಾತಕ್ಕೆ ಬಲಿ
ಕಳೆದೊಂದು ತಿಂಗಳ ಹೃದಯಾಘಾತ ಮಾಹಿತಿ ನೋಡಿದರೆ, ಇವರೆಡು ಸೇರಿ ಕಳೆದ ಒಂದು ತಿಂಗಳ ಅವಧಿಯಲ್ಲಿ 14ನೇ ಸಾವು. ಮೇ 20ರಂದು ಅರಕಲಗೂಡು ತಾಲೂಕಿನ ಅಭಿಷೇಕ್, ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂಧ್ಯಾ ಸಾವನ್ನಪ್ಪಿದ್ದರು. ಮೇ 28ರಂದು ಮತ್ತೋರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಆನಂತರ ಜೂನ್ 11ರಂದು ಹೊಳೆನರಸೀಪುರದ ಯುವಕ ನಿಶಾಂತ್ ಸಾವು, ಜೂನ್ 12ರಂದು ಕೆಎಸ್ಆರ್​​ಟಿಸಿ ಬಸ್​ನಲ್ಲಿ ಸಾರಿಗೆ ಸಿಬ್ಬಂದಿ ನಾಗಪ್ಪ ಸಾವು, ಅದೇ ದಿನ ಹಾಸನ ನಗರಸಭೆ ಮಾಜಿ ಸದಸ್ಯ ನೀಲಕಂಠಪ್ಪ ಮೃತಪಟ್ಟಿದ್ದರು.

ಜೂನ್ 13ರಂದು ಚನ್ನರಾಯಪಟ್ಟಣದ ಗ್ರಾಮ ಲೆಕ್ಕಿಗ ದೇವರಾಜ್ ಎಂಬುವರು ಕಾರಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದರು. ಅದೇ ದಿನ ಸತೀಶ್ ಎಂಬುವರು ಹಠಾತ್ ಸಾವಿಗೀಡಾಗಿದ್ದರು. 14ರಂದು ಕಾಂತರಾಜು ಮೃತಪಟ್ಟದ್ದರೆ, 18ರಂದು ಅರಸೀಕೆರೆ ಮೂಲದ ಶಿರಾದಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ನೌಕರ ನವೀನ್ ಸಾವನ್ನಪ್ಪಿದ್ದರು. 21ರಂದು ಬೇಲೂರಿನ ನಿಶಾದ್ ಅಹ್ಮದ್ ಹಾಗೂ ಹಾಸನ ಮೂಲದ ಚೇತನ್ ಹೃದಯಾಘಾತಕ್ಕೆ ಬಲಿಯಾಗಿದ್ದರು.

2 ವರ್ಷಗಳಲ್ಲಿ 507 ಜನರಿಗೆ ಹೃದಯಾಘಾತ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಬರೋಬ್ಬರಿ ಎರಡು ವರ್ಷಗಳಲ್ಲಿ 507 ಜನರಿಗೆ ಹೃದಯಾಘಾತವಾಗಿದೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರಿಗೆ ಹೃದಯಾಘಾತವಾಗಿದ್ದು, ಈ ಪೈಕಿ ಎರಡು ವರ್ಷಗಳಲ್ಲಿ ಒಟ್ಟು 140 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Tags: Appolo HospitalsBangaloreCOVID-19Govt HospitalsHassanheart attackheartattackHospitalsJayadeva HospitalsKarnatakaMedical emergencySparsh HospitalsVictoria Hospitals
Previous Post

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

Next Post

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada