ಎಸ್ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರಿಂದ ಭರ್ಜರಿಯಾಗಿ ಜಂಟಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 15 ಕೋಟಿ ಮೌಲ್ಯದ 1,500 ಕೆಜಿಗೂ ಅಧಿಕ ಗಾಂಜಾ ಜಪ್ತಿ ಮಾಡಲಾಗಿದೆ. ಒರಿಸ್ಸಾ ರಾಜ್ಯದ ಮಲ್ಕಾನ್ಗಿರಿ ಅರಣ್ಯ ಪ್ರದೇಶದಿಂದ ಅಕ್ರಮ ಗಾಂಜಾ ಸಾಗಾಟ ಮಾಡಲಾಗ್ತಿತ್ತು. ಖಚಿತ ಮಾಹಿತಿ ಆಧರಿಸಿ ಬಂಧನ ಮಾಡಲಾಗಿದೆ.
ಬೀದರ್ ಜಿಲ್ಲೆ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಹಿಂಬಾಲಿಸಿಕೊಂಡು ಬಂದ ಬೆಂಗಳೂರು ಎನ್ಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿಯ ಬಳಿ ಗಾಂಜಾ ಜಪ್ತಿ ಮಾಡಲಾಗಿದೆ.