ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 17 ಮಂದಿ ಸಜೀವದಹನಗೊಂಡ ಘಟನೆ ಚೀನಾದಲ್ಲಿ ಸಂಭವಿಸಿದೆ.
ಉತ್ತರ ಚೀನಾದ ಚಂಗ್ ಚುನ್ ನಗರದಲ್ಲಿ ಮಂಗಳವಾರ ತಡರಾತ್ರಿ 12.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ತೆರಳಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ರಕ್ಷಣ ಕಾರ್ಯ ತಡರಾತ್ರಿ 3 ಗಂಟೆಯವರೆಗೂ ನಡೆದಿದೆ ಎಂದು ಹೇಳಲಾಗಿದೆ.
ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದ್ದು, ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತರ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.