• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

6 ವರ್ಷಗಳಲ್ಲಿ ರಾಜ್ಯಕ್ಕೆ 19.2 ಗಿ.ವ್ಯಾ. ನವೀಕರಿಸಬಹುದಾದ ಇಂಧನ ಸೇರ್ಪಡೆ: ಗೌರವ್‌ಗುಪ್ತಾ

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

>ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಹೊಸ ಸಂಕಲ್ಪ ಸಾಕಾರ
> ಗುಜರಾತ್‌ನಲ್ಲಿ ನಡೆಯುತ್ತಿರುವ 4ನೇ ನವೀಕರಿಸಬಹುದಾದ ಇಂಧನ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್‌ಗೆ ಪ್ರಧಾನಿ ಮೋದಿ ಭೇಟಿ

ADVERTISEMENT

ಗಾಂಧಿನಗರ, ಸೆಪ್ಟೆಂಬರ್‌ 16, 2023: ರಾಜ್ಯದ ನವೀಕರಿಸಬಹುದಾದ ಇಂಧನದ ಈಗಿನ 18 ಗಿ.ವ್ಯಾ. ಸಾಮರ್ಥ್ಯದ ಜತೆಗೆ ಮುಂದಿನ 6 ವರ್ಷಗಳಲ್ಲಿ 19.2 ಗಿ.ವ್ಯಾ. ಸೇರ್ಪಡೆಗೊಳಿಸಲಾಗುವುದು ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ.

ಗುಜರಾತಿನ ಗಾಂಧಿನಗರದ ಮಹಾತ್ಮ ಮಂದಿರ ಸಭಾಂಗಣದಲ್ಲಿ ನಡೆಯುತ್ತಿರುವ 3 ದಿನಗಳ ‘ನವೀಕರಿಸಬಹುದಾದ ಇಂಧನ ಹೂಡಿಕೆ ಸಮಾವೇಶ’ದಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದ ಅವರು, “2030ರ ವೇಳೆಗೆ ದೇಶದ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಸಾಮರ್ಥ್ಯವನ್ನು 500 ಗಿ.ಗ್ಯಾ. ಹೆಚ್ಚಿಸಬೇಕೆಂಬ ಸಂಕಲ್ಪಕ್ಕೆ ಬದ್ಧವಾಗಿ ರಾಜ್ಯದ ಹಸಿರು ಇಂಧನ ಉತ್ಪಾದನೆ ಸಾಮರ್ಥ್ಯಕ್ಕೆ ಮುಂದಿನ 6 ವರ್ಷಗಳಲ್ಲಿ 19.2 ಗಿ.ವ್ಯಾ. ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಈ ಹೊಸ ಸಂಕಲ್ಪ ಸಾಕಾರಗೊಳಿಸಲಾಗುವುದು,” ಎಂದರು.

“ಪಾವಗಡ ಸೋಲಾರ್‌ ಪಾರ್ಕ್‌ ಎರಡನೇ ಅತಿ ದೊಡ್ಡ ಸೋಲಾರ್ ಪಾರ್ಕ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪವನ ವಿದ್ಯುತ್‌ ಸಾಮರ್ಥ್ಯದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದ್ದು, ಒಟ್ಟಾರೆ ಸೌರ ವಿದ್ಯುತ್‌ ಸಾಮರ್ಥ್ಯದಲ್ಲೂ ರಾಜ್ಯ ಮೂರನೇ ಸ್ಥಾನದಲ್ಲಿದೆ. ಒಟ್ಟಾರೆ ಜಲವಿದ್ಯುತ್‌ ಸಾಮರ್ಥ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಈ ನಾಲ್ಕು ವಲಯಗಳಲ್ಲಿನ ರಾಜ್ಯದ ಸಾಧನೆಗಾಗಿ ಸಮಾವೇಶದಲ್ಲಿ ಕೆಂದ್ರ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ್‌ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು,” ಎಂದು ಹರ್ಷ ವ್ಯಕ್ತಪಡಿಸಿದರು.

“ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಉತ್ತೇಜನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಹಸಿರು ಇಂಧನ ಸಾಮರ್ಥ್ಯ ಹೆಚ್ಚಳಕ್ಕೆ ಈಗಾಗಲೇ ಹಲವಾರು ಉಪಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಜತೆಗೆ ಈ ವಲಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಪ್ರಕ್ರಿಯೆಗಳನ್ನು ಸರಳಗೊಳಿಸಲಾಗಿದೆ. ಅಲ್ಲದೇ, ಯೋಜನೆಗಳು ಸಕಾಲದಲ್ಲಿ ಕಾರ್ಯಗತಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಪೂರಕ ನೀತಿ ರೂಪಿಸಲಾಗಿದೆ. ಉದಾಹರಣೆಗೆ, ಭೂಸ್ವಾಧೀನ ಪ್ರಕ್ರಿಯೆಗಳನ್ನು ಸರಳಗೊಳಿಸಿದ್ದೇವೆ. ತ್ವರಿತ ಅನುಮತಿಗಳನ್ನು ನೀಡಿದ್ದೇವೆ ಮತ್ತು ರಾಜ್ಯದ ಕೈಗಾರಿಕಾ ನೀತಿಗೆ ಅನುಗುಣವಾಗಿ ಯೋಜನೆಗಳಿಗೆ ಪ್ರೋತ್ಸಾಹಕಗಳನ್ನು ಒದಗಿಸಿದ್ದೇವೆ. ಈ ಕ್ರಮಗಳಿಂದಾಗಿ ಕರ್ನಾಟಕವು ಹೂಡಿಕೆಗೆ ಆದ್ಯತೆಯ ತಾಣವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣವೂ ಹೆಚ್ಚಿದೆ,” ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಮಾತನಾಡಿ, “2023-24ರ ಆರ್ಥಿಕ ವರ್ಷದಲ್ಲಿಯೇ ನಾವು 1,027 ಮೆಗಾವ್ಯಾಟ್‌ ಸಾಮರ್ಥ್ಯದ ಪವನ ಯೋಜನೆಗಳನ್ನು ನಿಯೋಜಿಸಿದ್ದೇವೆ. ಸ್ಥಿರ ಮತ್ತು ವಿಶ್ವಾಸಾರ್ಹ ಇಂಧನ ಪೂರೈಕೆಯ ಖಾತ್ರಿಗಾಗಿ ಸೌರ ಮತ್ತು ಪವನ ಶಕ್ತಿಯನ್ನು ಸಂಯೋಜಿಸಲಾಗುತ್ತಿದೆ. ಉದ್ಯಮಗಳು ಮತ್ತು ಹೂಡಿಕೆದಾರರಿಗೆ ರಾಜ್ಯದಲ್ಲಿ ಅನುಕೂಲಕರ ವಾತಾವರಣವಿದೆ,”ಎಂದು ತಿಳಿಸಿದರು.

ಪ್ರಧಾನಿ ಮೋದಿ ಭೇಟಿ

ಹೊಯ್ಸಳ ವಾಸ್ತು ಶೈಲಿ”ಯಲ್ಲಿ ನಿರ್ಮಿಸಿರುವ ಕರ್ನಾಟಕ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದರು. ನವೀಕರಿಸಬಹುದಾದದ ಇಂಧನ- ಸೌರ (ಪಾವಗಡ ಸೋಲಾರ್‌ ಪಾರ್ಕ್‌), ರಾಜ್ಯದ ಪವನ ವಿದ್ಯುತ್‌, ಜೈವಿಕ ಇಂಧನ, ಕಿರು ಜಲ ವಿದ್ಯುತ್‌ ಯೋಜನೆಗಳ ಬಗ್ಗೆ ಪ್ರಧಾನಿಗೆ ಗೌರವ ಗುಪ್ತಾ ವಿವರಿಸಿದರು. ಪ್ರಧಾನಿ ಮೋದಿ ಅವರ ಜತ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ್‌ ಜೋಶಿ ಅವರು ನಮ್ಮ ಪೆವಿಲಿಯನ್‌ಗೆ ಭೇಟಿ ನೀಡಿ ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳ ಕುರಿತಂತೆ ಮಾಹಿತಿ ಪಡೆದರು.

ಸಮಾವೇಶದಲ್ಲಿ 4 ಪಾಲುದಾರ ರಾಷ್ಟ್ರಗಳು, 7 ಪಾಲುದಾರ ರಾಜ್ಯಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಪ್ರತಿನಿಧಿಳು, ಹೂಡಿಕೆದಾರರು ಸೇರಿ ಒಟ್ಟು 10,000 ಮಂದಿ ಭಾಗಿಯಾಗಿದ್ದರು.

Tags: BJPChandrababu NaiduCongress PartyGowravguptaGujarathjpnaddakjgeorgeನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಾಣ ಉಳಿಸಿಕೊಳ್ಳಲು ಓಡಿಹೋಗುತ್ತಿದ್ದ ಉಗ್ರನನ್ನು ಭಾರತೀಯ ಸೇನೆ ಸದೆಬಡಿದ ದೃಶ್ಯ; ಡ್ರೋನ್ ಕ್ಯಾಮೆರಾದಲ್ಲಿ ಸೆರೆ!

Next Post

ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ! ಮೃತದೇಹಕ್ಕಾಗಿ ಶೋಧ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post

ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ! ಮೃತದೇಹಕ್ಕಾಗಿ ಶೋಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada