• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮುಂಬರುವ ಬೇಸಿಗೆಯಲ್ಲಿ 19 ಸಾವಿರ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Uncategorized
0
Share on WhatsAppShare on FacebookShare on Telegram
  • ಅಗತ್ಯ ವಿದ್ಯುತ್ ಲಭ್ಯವಿರುವುದರಿಂದ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡುವ ಪರಿಸ್ಥಿತಿ ಇಲ್ಲ ಹೆಚ್ಚು ವಿದ್ಯುತ್ ಉತ್ಪಾದನೆ, ದೀರ್ಘಾವಧಿ ಖರೀದಿ ಒಪ್ಪಂದದ ಮೂಲಕ ಅಗತ್ಯ ವಿದ್ಯುತ್ ಪೂರೈಸಲು ಕ್ರಮ.

ದೊಡ್ಡಬಳ್ಳಾಪುರ, ಜ. 9, 2025: ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ADVERTISEMENT
K P Srikanth: ನಟಿ ರಚಿತಾ ರಾಮ್‌ ಹಾಡಿ ಹೊಗಳಿದ ನಿರ್ಮಾಪಕ KP ಶ್ರೀಕಾಂತ್..! #ramya #rakshitha #rachitaram

ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ (ಐಎ) ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಅಗತ್ಯ ವಿದ್ಯುತ್ ಪೂರೈಕೆಗೆ ಕ್ರಮ:
ಇದಕ್ಕೂ ಮುನ್ನ ಪರಿಶೀಲನಾ ಸಭೆಯಲ್ಲಿ ಮತನಾಡಿದ ಸಚಿವ ಕೆ.ಜೆ.ಜಾರ್ಜ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೃಷಿ ಚಟುವಟಿಕೆ ಜತೆಗೆ ಕೈಗಾರಿಕೆಗಳಿಗೂ ಸಮರ್ಪಕ ವಿದ್ಯುತ್ ಪೂರೈಸಬೇಕಾಗಿದ. ಹೀಗಾಗಿ ಸುಗಮ ವಿದ್ಯುತ್ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ. ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಈ ಫೀಡರ್ ಮಟ್ಟದ ಸೌರೀಕರಣ ಕಾಮಗಾರಿಯನ್ನು ಎಲ್ಲಾ ಕಡೆ ಏಕಕಾಲದಲ್ಲಿ ಕೈಗೊಂಡು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಎಂದು ಅನುಷ್ಟಾನ ಏಜನ್ಸಿಗಳಿಗೆ ಸಚಿವರು ಸೂಚನೆ ನೀಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.

ಟ್ರಾನ್ಸ್ ಫಾರ್ಮರ್ ಗಳಲ್ಲಿ ಸಮಸ್ಯೆ ಉದ್ಭವವಾದರೆ ತಕ್ಷಣ ಅದನ್ನು ಬದಲಾಯಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 213 ಟ್ರಾನ್ಸ್ ಫಾರ್ಮರ್ ಗಳು ಲಭ್ಯವಿದೆ. ಜತೆಗೆ ವಿದ್ಯುತ್ ಕಂಬಗಳು, ಕಂಡಕ್ಟರ್ ಗಳನ್ನು ಕೂಡ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದರು.

ನಲಮಂಗಲ ನಗರದಲ್ಲಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಅಳವಡಿಸಬೇಕು ಎಂಬ ಶಾಸಕ ಎನ್.ಶ್ರೀನಿವಾಸ್ ಅವರ ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೊಸಕೋಟೆ ತಾಲೂಕಿನಲ್ಲಿ ಕುಸುಮ್-ಸಿ ಯೋಜನೆಯಡಿ ಕೆರೆಗಳ ಅಂಗಳಗಳಲ್ಲಿ ನಡೆಯುತ್ತಿರುವ ಫೀಡರ್ ಸೌರೀಕರಣ ಕಾಮಗಾರಿಗಳನ್ನು ತ್ವರಿತವಗಿ ಪೂರ್ಣಗೊಳಿಸೇಕು ಎಂಬ ಶಾಸಕ ಶರತ್ ಬಚ್ಚೇಗೌಡ ಅವರ ಮನವಿಗೆ ಪ್ರತಿಕ್ರಿಯಿಸಿ, ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯೂ ಆಗಿರುವ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕರಾದ ಶರತ್ ಬಚ್ಚೇಗೌಡ, ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಬಯಪಾ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿಗಳ ಅನುಷ್ಟಾನ ಸಮಿತಿ ಅಧ್ಯಕ್ಷ ರಾಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.

Tags: Bangalore Rural DCBescomDoddaballapurGourav GuptaHC mahadevappaK H MuniyappaKJ GeorgeKPTCLMahanthesh BeelagiN SrinivasPankaj KumarPower ministerRajannaS RaviShantha Kumarsharath bacchegowda
Previous Post

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಪ್ರತಿದಿನ ಮೇಕಪ್ ಬಳಸುವುದರಿಂದ, ತ್ವಚೆಗೆ ಆಗುವ ಅಡ್ಡ ಪರಿಣಾಮಗಳೇನು ಗೊತ್ತಾ?

Related Posts

Uncategorized

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

by ಪ್ರತಿಧ್ವನಿ
October 11, 2025
0

ಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

September 7, 2025
Next Post
ಪ್ರತಿದಿನ ಮೇಕಪ್ ಬಳಸುವುದರಿಂದ, ತ್ವಚೆಗೆ ಆಗುವ ಅಡ್ಡ ಪರಿಣಾಮಗಳೇನು ಗೊತ್ತಾ?

ಪ್ರತಿದಿನ ಮೇಕಪ್ ಬಳಸುವುದರಿಂದ, ತ್ವಚೆಗೆ ಆಗುವ ಅಡ್ಡ ಪರಿಣಾಮಗಳೇನು ಗೊತ್ತಾ?

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada