ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,946 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,46,34,376ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,28,923ಕ್ಕೆ ಏರಿಕೆ ಆಗಿದೆ
ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 4,40,79,485ಕ್ಕೆ ಏರಿಕೆಯಾಗಿದ್ದು, ಈವರೆಗೆ 219.41 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.













