ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿ ಗುಜರಾತ್ ಮೂಲದ ಮೂವರು ಹಾಗೂ ಕೇರಳ ಮೂಲದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಅಸುನೀಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.