ವೀರ ಸಾವರ್ಕರ್ ಫ್ಲೆಕ್ಸ್ ಕಿತ್ತು ಹಾಕಿದ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಎರಡು ದಿನ ನಿಷೇದಾಜ್ಞೆ ಜಾರಿಗಳಿಸಲಾಗಿದೆ.
ತಹಸೀಲ್ದಾರ್ ನಾಗರಾಜ್ ಸೋಮವಾರ ಆದೇಶ ಹೊರಡಿಸಿದ್ದು, ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು.

ವೀರ ಸಾವರ್ಕರ್ ಫ್ಲೆಕ್ಸ್ ಗೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಯುವಕರು ಫ್ಲೆಕ್ಸ್ ತೆಗೆದು ಹಾಕಿದ್ದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದರು.
ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಫ್ಲೆಕ್ಸ್ ತೆಗೆದು ಹಾಕಿದ ಯುವಕರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ನಂತರ ವೃತ್ತದ ಬಳಿ ಇದ್ದ ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೇ . ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಬೆನ್ನಲ್ಲೇ ವೀರ ಸಾವರ್ಕರ್ ಫೋಟೊ ತೆಗೆದುಹಾಕಿದ್ದಕ್ಕೆ ಹಿಂದೂಪರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿ ಧರಣಿ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಈ ಪ್ರದೇಶದಲ್ಲಿ ಹಿಂದೆ ಟಿಪ್ಪು ಸುಲ್ತಾನ್ ಫೋಟೊ ಇರಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವೀರ ಸಾವರ್ಕರ್ ಫೋಟೊ ಹಾಕಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದರು.