2023 ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿರುವಾಗಲೇ ಕಾಂಗ್ರೆಸ್‌ನ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೇ ಬಿರುಕುಬಿಟ್ಟಿದೆ. ಹೀಗಾಗಿ ಯಾವುದೇ ಕಾರಣಕ್ಕೂ ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಬೇಡಿ ಎಂದು ಪಕ್ಷದ ಶಾಸಕರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ಹೀಗಿದ್ದರೂ ಹೈಕಮಾಂಡ್ ಆದೇಶದ ಹೊರತಾಗಿಯೂ ಮುಂದಿನ ಸಿಎಂ ಸಿದ್ದರಾಮಯ್ಯನವರೇ ಆಗಬೇಕು ಎಂದು ಕೆಲವು ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದು ಡಿ.ಕೆ ಶಿವಕುಮಾರ್ ಗೆ ಇರುಸು ಮುರುಸು ಉಂಟು ಮಾಡಿದೆ.

Also Read:ದೆಹಲಿಯಿಂದ ಬರುತ್ತಲೇ ಸಿದ್ದರಾಮಯ್ಯ ವಿರುದ್ಧ ಗುಟುರು ಹಾಕಿದರೇ ಡಿಕೆಶಿ?
ಮುಂದಿನ ಸಿಎಂ ವಿಚಾರದ ಬಗ್ಗೆ ಮಾತಾಡುತ್ತಿರುವ ಶಾಸಕರನ್ನು ನಿಯಂತ್ರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೊಮ್ಮೆ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು.ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಯಾವ ಕಾಂಗ್ರೆಸ್ ನಾಯಕರು ಹೀಗೆ ಮಾತಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಯಾರು ಹೇಳಬಾರದು. ಇಂತಹ ಹೇಳಿಕೆ ನೀಡುವುದು ಬೇಡ ಎಂದು ಸಿದ್ದರಾಮಯ್ಯ ಪಕ್ಷದ ಶಾಸಕರಲ್ಲಿ ಮನವಿ ಮಾಡಿದ್ದರು.
Also Read: ಪ್ರತಿಪಕ್ಷ ಕಾಂಗ್ರೆಸ್ ಹೊಣಗೇಡಿತನ ಬಯಲು ಮಾಡಿದ ಸಿಎಂ ಅಭ್ಯರ್ಥಿ ಚರ್ಚೆ
ಇಷ್ಟಕ್ಕೆ ನಿಲ್ಲದ ಮುಂದಿನ ಸಿಎಂ ಚರ್ಚೆ ವಿಚಾರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಕಾರಣವಾಯ್ತು. ಇದು ಕೆಲ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗುತ್ತಿದ್ದರೆ, ಇನ್ನು ಕೆಲವರು ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗುವ ಹಂತಕ್ಕೆ ತಲುಪಿತು. ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗಬಹುದು ಎಂದು ಚಿಂತಿಸಿರುವ ಹೈಕಮಾಂಡ್ ಈಗ ಇದರ ಕುರಿತು ಚರ್ಚಿಸಲು ದೆಹಲಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರನ್ನು ಕರೆಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
Also Read:ಕಾಂಗ್ರೆಸ್ ಒಳಜಗಳ: ಪತ್ರಕರ್ತರ ಪ್ರಶ್ನೆಗಳಿಗೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ – ಮೈಕ್ ತಳ್ಳಿ ಆಕ್ರೋಶ
ರಾಹುಲ್ ಗಾಂಧಿ ಕರೆ ಮೇರೆಗೆ ಸೋಮವಾರ ಇಬ್ಬರೂ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಈ ವೇಳೆ ರಾಜ್ಯದ ಪಕ್ಷದ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಾರೆ. ಪದಾಧಿಕಾರಿಗಳ ನೇಮಕ, ಸಿಎಂ ಹೇಳಿಕೆ ಗಲಾಟೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಹುಲ್ ಗಾಂಧಿ, ಮೊದಲಿಗೆ ಒಬ್ಬೊಬ್ಬರನ್ನೇ ಕರೆದು ಚರ್ಚೆ ನಡೆಸಲಿದ್ದಾರೆ. ನಂತರ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಬ್ಬರನ್ನೂ ಒಟ್ಟಿಗೆ ಕೂರಿಸಿ ಚರ್ಚೆ ಮಾಡಲಿದ್ದಾರೆ.
Also Read:ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?
ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಖಾನ್, ರಾಘವೇಂದ್ರ ಹಿಟ್ನಾಳ್, ಜೆ.ಎನ್. ಗಣೇಶ್, ಭೀಮಾ ನಾಯಕ್, ರಾಮಪ್ಪ ಮತ್ತು ಆರ್. ಅಖಂಡ ಶ್ರೀನಿವಾಸ ಮೂರ್ತಿ, ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಡಿಕೆ ಶಿವಕುಮಾರ್ಗೆ ಅವಮಾನ ಮಾಡಿತ್ತು.
ಡಿ.ಕೆ ಶಿವಕುಮಾರ್ ಸಿಎಂ ಆಗಿದ್ದರೆ ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಬರುತಿತ್ತು ಎಂದು ಕೆಲವು ದಿನಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಇದರಿಂದ ಎಚ್ಚೆತ್ತ ಸಿದ್ದರಾಮಯ್ಯ ಆಪ್ತರು ತಮ್ಮ ನೆಚ್ಚಿನ ನಾಯಕನ ಪರ ಬ್ಯಾಟ್ ಬೀಸುತ್ತಿದ್ದಾರೆ. ಈ ಉಭಯ ನಾಯಕರ ನಡುವಣ ರಾಜಕೀಯ ಮೇಲುಗೈತನ ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಸಮಸ್ಯೆಯಾಗಬಹುದು ಎಂದು ಹೇಳಲಾಗಿತ್ತು.
Also Read:ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಗೆ ಕರ್ಚೀಫ್ ಹಾಕುವ ಮುನ್ನ ಕೇಳಿಕೊಳ್ಳಬೇಕಾದ ಪ್ರಶ್ನೆಗಳು!











