ಬೆಂಗಳೂರು : ಜೂನ್.2. ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು, ಅದರ ಜೊತೆಗೆ 10% ವಿದ್ಯುತನ್ನು ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುವುದು.
ಜುಲೈ 1ರ ವರೆಗೆ ಬಳಕೆ ಮಾಡಿರುವ ವಿದ್ಯುತ್ ಬಿಲ್ ಅನ್ನು ಬಳಕೆದಾರರು ಕಟ್ಟಬೇಕಿದ್ದು, ಆಗಸ್ಟ್ ನಿಂದ ಎಲ್ಲರೂ ಯೋಜನೆಯ ಲಾಭ ಪಡೆಯಬಹುದಾಗಿದೆ. ಜನತೆಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ಮನೆಗೆ ಉಚಿತ್ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.