ರಾಜ್ಯ ಸರ್ಕಾರವು 2024ನೇ ಸಾಲಿನಲ್ಲಿ 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024ರ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ನಿನ್ನೆ (ಗುರುವಾರ) ನಡೆದ ನವೆಂಬರ್ ತಿಂಗಳ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ಈ ರಜಾ ಪಟ್ಟಿಯಲ್ಲಿ ಭಾನುವಾರ ಬರುವ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ (14.04.2024) ಮತ್ತು ಮಹಾವೀರ ಜಯಂತಿ (21.04.2024) ಹಾಗೂ ಎರಡನೇ ಶನಿವಾರದಂದು ಬರುವ ವಿಜಯದಶಮಿ (12.10.2024) ಯನ್ನು ನಮೂದಿಸಲಾಗಿಲ್ಲ.
ಅಲ್ಲದೇ, ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ. ಕಚೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಜೊತೆಗೆ, ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇನ್ನು, 03.09.2024 (ಮಂಗಳವಾರ) ಕೈಲ್ ಮೂಹೂರ್ತ, 17. 10. 2024 (ಗುರುವಾರ) ತುಲಾ ಸಂಕ್ರಮಣ ಹಾಗೂ 14. 12. 2024 (ಶನಿವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಯ ಜನರಿಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನೂ ಸರ್ಕಾರ ಘೋಷಿಸಿದೆ.
2024 ಸಾರ್ವತ್ರಿಕ ರಜೆಗಳ ಪಟ್ಟಿ ಹೀಗಿದೆ.
ಜನವರಿ 15: ಸಂಕ್ರಾಂತಿ ಹಬ್ಬ
ಜನವರಿ 26: ಗಣರಾಜ್ಯೋತ್ಸವ
ಮಾರ್ಚ್ 8: ಮಹಾಶಿವರಾತ್ರಿ
ಮಾರ್ಚ್ 29: ಗುಡ್ಫ್ರೈಡೆ
ಏಪ್ರಿಲ್ 9: ಯುಗಾದಿ ಹಬ್ಬ
ಏಪ್ರಿಲ್ 11: ರಂಜಾನ್
ಮೇ 1: ಕಾರ್ಮಿರ ದಿನಾಚರಣೆ
ಮೇ 10: ಬಸವಜಯಂತಿ/ ಅಕ್ಷಯ ತೃತೀಯ
ಜೂನ್ 17: ಬಕ್ರೀದ್
ಜುಲೈ 17: ಮೊಹರಂ ಕಡೇ ದಿನ
ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
ಸೆಪ್ಟೆಂಬರ್ 7: ಗಣೇಶ ಚತುರ್ಥಿ
ಸೆಪ್ಟೆಂಬರ್ 16: ಈದ್ ಮಿಲಾದ್
ಅಕ್ಟೋಬರ್ 2: ಗಾಂಧಿ ಜಯಂತಿ
ಅಕ್ಟೋಬರ್ 11: ಮಹಾನವಮಿ/ ಆಯುಧ ಪೂಜೆ
ಅಕ್ಟೋಬರ್ 17: ಮಹರ್ಷಿ ವಾಲ್ಮೀಕಿ ಜಯಂತಿ
ಅಕ್ಟೋಬರ್ 31: ನರಕ ಚತುರ್ದಶಿ
ನವೆಂಬರ್ 1: ಕನ್ನಡ ರಾಜ್ಯೋತ್ಸವ
ನವೆಂಬರ್ 2: ಬಲಿಪಾಡ್ಯಮಿ
ನವೆಂಬರ್ 18: ಕನಕದಾಸ ಜಯಂತಿ
ಡಿಸೆಂಬರ್ 25: ಕ್ರಿಸ್ಮಸ್