ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,060 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,28,905ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 4,40,75,149ಕ್ಕೆ ಏರಿಕೆಯಾಗಿದ್ದು, ಈವರೆಗೆ 219.33 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.






