ಯಮುನೋತ್ರಿಗೆ ತೆರಳುತ್ತಿದ್ದ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಮಂದಿ ಯಾತ್ರಾರ್ಥಿಗಳು ಮೃತಪಟ್ಟ ಘಟನೆ ಉತ್ತರಾಖಂಡ್ ನ ಡಮ್ಟಾದಲ್ಲಿ ಭಾನುವಾರ ಸಂಭವಿಸಿದೆ.
ಮಧ್ಯಪ್ರದೇಶದಿಂದ ಯಮುನೋತ್ರಿಗೆ ಹೊರಟ್ಟಿದ್ದ 28 ಪ್ರಯಾಣಿಕರಿದ್ದ ಬಸ್ ಪ್ರಪಾತಕ್ಕೆ ಉರುಳಿ ಬಿದ್ದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.












