ಕಾಲೇಜಿನ ಲ್ಯಾನ್ ಒಂದರಲ್ಲಿ ರಾಸಾಯನಿಕ ಅನಿಲ ಸೋರಿಕೆಯಾದ ಕಾರಣ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಹೈದರಾಬಾದಿನ ಕಸ್ತೂರ್ಬಾ ಕಾಲೇಜಿನಲ್ಲಿ ನಡೆದಿದೆ.
ವಿಷಯ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದೆ.
ಸ್ಥಳದಲ್ಲಿ ವಿಧಿವಿಜ್ಞಾನ ಸಿಬ್ಬಂದಿ ರಾಸಾಯನಿಕ ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ.