ಮಂಡ್ಯ (Mandya) : ಬಾಕ್ಸ್ ಆಫೀಸ್ ಸುಲ್ತಾನ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟು 25 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂಡ್ಯದಲ್ಲಿ `D 25 ಬೆಳ್ಳಿ ಪರ್ವ’ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ.
![](https://pratidhvani.com/wp-content/uploads/2024/02/96027856.webp)
ಇಂದು ಸಂಜೆ 5 ಗಂಟೆಗೆ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಆದಿ ಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
![](https://pratidhvani.com/wp-content/uploads/2024/02/Screenshot_20240217-100707_WhatsApp-1024x565.webp)
ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಅಭಿಮಾನಿಗಳು ನಟ ಚಾಲೆಂಜಿಂಗ್ ಸ್ಟಾರ್ ಗೆ ಅಭಿನಂದನೆ ಸಲ್ಲಿಸಲಿದ್ದಾರೆ.
![](https://pratidhvani.com/wp-content/uploads/2024/02/Screenshot_20240217-100731_WhatsApp-1024x391.webp)
ಸುಮಾರು 25 ಸಾವಿರ ಜನರು ಕೂರುವ ಆಸನದ ವ್ಯವಸ್ಥೆ ಮಾಡಲಾಗಿದ್ದು, ನಿರ್ದೇಶಕ ಮಹೇಶ್ ಸುಖಧರೆ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿರುವ ಬೃಹತ್ ವೇದಿಕೆ ಸಿದ್ಧಗೊಂಡಿದೆ.
#Karnataka #sandalwood #Darshan #challengingstar #actor #cinema