ಕಚೇರಿಯ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಗೆ ಕನಿಷ್ಠ 27 ಮಂದಿ ಮೃತಪಟ್ಟ ದಾರುಣ ಘಟನೆ ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದೆ.
ಶುಕ್ರವಾರ ಸಂಜೆ 4.45ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ರಾತ್ರಿ 10 ಗಂಟೆ ಕಳೆದರೂ ನಂದಿಸಲು ಸಾಧ್ಯವಾಗಿಲ್ಲ. ಕಟ್ಟಡದಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.